ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳು ಲಂಡನ್ ಸ್ಟಾಕ್ ಎಕ್ಸಚೇಂಜ್ ಗ್ರೂಪ್‌ಗೆ ಆಯ್ಕೆ; ಆಕರ್ಷಕ 11.5 ಲಕ್ಷ ಪ್ಯಾಕೇಜ್

ಮೂಡಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳು ಪ್ರತಿಷ್ಟಿತ ಲಂಡನ್ ಸ್ಟಾಕ್ ಎಕ್ಸಚೇಂಜ್ ಗ್ರೂಪ್‌ಗೆ ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ತಲಾ 11.5ಲಕ್ಷ ಪ್ಯಾಕೇಜ್‌ನೊಂದಿಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಿಜಾರಿನಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ನಡೆದಿತ್ತು.


ಕೊನೆಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ವಿನಯ್ ಪಿ ಹುಂಡೇಕರ್ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಖುಷಿ ವಿಕೆ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಶ್ವೇತಾ ಶರ್ಮಾ(ಇನ್ಫೋðಮೇಷನ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್)ಜೇಮ್ಸ್ ಜೋಸೆಫ್ (ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್), ಶ್ವೇತಾ ಸಿ(ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್) ಉನ್ನತ ಪ್ಯಾಕೇಜ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.


ವಿಶ್ವದ ಪ್ರಮುಖ ಹಣಕಾಸು ಮಾರುಕಟ್ಟೆಗಳ ಮೂಲಸೌಕರ್ಯ ಪೂರೈಕೆದಾರರಲ್ಲಿ ಒಂದಾಗಿರುವ ಲಂಡನ್ ಸ್ಟಾಕ್ ಎಕ್ಸಚೇಂಜ್ ಕಂಪೆನಿಯು, ಪ್ರಪಂಚದ 190 ದೇಶಗಳಲ್ಲಿ 40,000 ಕ್ಕೂ ಹೆಚ್ಚು ಗ್ರಾಹಕರಿಗೆ ಹಣಕಾಸಿನ ಡೇಟಾ, ವಿಶ್ಲೇಷಣೆಗಳು, ಸುದ್ದಿ ಮತ್ತು ಸೂಚ್ಯಂಕದ ಮಾಹಿತಿಯನ್ನು ನೀಡುತ್ತಿದೆ.


ಆಳ್ವಾಸ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದು ಶೈಕ್ಷಣಿಕ ವರ್ಷದಲ್ಲಿ ಸರಾಸರಿ 400ಕ್ಕೂ ಅಧಿಕ ಕಂಪೆನಿಗಳು ನೇಮಕಾತಿಗಾಗಿ ಕ್ಯಾಂಪಸ್‌ಗೆ ಆಗಮಿಸುತ್ತವೆ. ಇಲ್ಲಿ ವಿದ್ಯಾಭ್ಯಾಸ ಮಾಡುವ 90ಶೇಕಡಾ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕವೇ ಉದ್ಯೋಗ ಪಡೆಯುತ್ತಿರುವುದು ಹೆಮ್ಮೆಯ ವಿಶೇಷ. ದೇಶದ ಉನ್ನತ ಕಂಪೆನಿಗಳಾದ ಸ್ಯಾಪ್ ಲ್ಯಾಬ್ಸ್, ಇವೈ, ಕಾಗ್ನಿಝೆಂಟ್, ಅಮೇಜಾನ್, ಟಿಸಿಎಸ್, ಕೆಪಿಎಂಜಿ, ಟೊಯೋಟೊ ಕಿರ್ಲೋಸ್ಕರ್, ಎಕ್ಸೇಂಚರ್, ವಿಧುಮ್ ನೇರ ನೇಮಕಾತಿಗಾಗಿ ಸದಾ ಕ್ಯಾಂಪಸ್‌ಗೆ ಆಗಮಿಸುತ್ತವೆ. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿಯ ಜೊತೆಗೆ, ಪ್ರತಿ ವರ್ಷ ನಡೆಯುವ ಆಳ್ವಾಸ್ ಪ್ರಗತಿ-ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶವೂ ಇರುತ್ತದೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ, ಆಳ್ವಾಸ್ ಇಂಜಿನಿಯರಿ0ಗ್ ಕಾಲೇಜಿನ ವಿದ್ಯಾರ್ಥಿಗಳಾದ ತುಳಸಿ ಹಾಗೂ ಅನೂಜ್ ಪ್ರತಿಷ್ಟಿತ ಫಿನ್‌ಟೆಕ್ ಕಂಪೆನಿ -ಜಸ್ಪೇಗೆ ೨೧ ಲಕ್ಷದ ಪ್ಯಾಕೇಜ್‌ಗೆ ಆಯ್ಕೆಯಾಗಿರುವುದು ಸಂಸ್ಥೆಯ ಗುಣಮಟ್ಟದ ಶಿಕ್ಷಣ ಹಾಗೂ ತರಬೇತಿಗೆ ಹಿಡಿದ ಕೈಗನ್ನಡಿ ಯಾಗಿದೆ.


ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!