ಜನ ಮನದ ನಾಡಿ ಮಿಡಿತ

Advertisement

“ಸ್ವಚ್ಛತಾ ಹೀ ಸೇವಾ”ದ ಅಂಗವಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೂಡಬಿದಿರೆ: ದೇಶದಾದ್ಯಂತ ಸೆಪ್ಟಂಬರ್ 15 ರಿಂದ ಅಕ್ಟೋಬರ್ 02ರ ವರೆಗೆ ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನಲೆಯಲ್ಲಿ ನಡೆಯುತ್ತಿರುವ “ಸ್ವಚ್ಛತಾ ಹೀ ಸೇವಾ”ದ ಅಂಗವಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಆಸುಪಾಸು ಹಾಗೂ ಪುತ್ತಿಗೆ ಗ್ರಾಮ ಪಂಚಾಯಿತಿಯ ರಸ್ತೆಯ ಬದಿಗಳನ್ನು ಕಾಲೇಜಿನ ಸುಮಾರು ನೂರು ವಿದ್ಯಾರ್ಥಿಗಳು, 25ಕ್ಕೂ ಅಧಿಕ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಸೇರಿ ಸ್ವಚ್ಛಗೊಳಿಸಿದರು.
ವಿದ್ಯಾರ್ಥಿಗಳು ಅಭಿಯಾನದ ಅಂಗವಾಗಿ ‘ಮನಸ್ಸು ಮತ್ತು ಪರಿಸರ ಎರಡನ್ನು ಸ್ವಚ್ಛವಾಗಿಡಿ’, ‘ಸ್ವಚ್ಛತೆ ದೈವತ್ವ’, ‘ಪ್ಲಾಸ್ಟಿಕ್ ಉಳಿವು ಜೀವಿಗಳ ಅಳಿವು’, ‘ಸ್ವಚ್ಛತೆ ಕಾಪಾಡಿ ರೋಗಗಳಿಂದ ದೂರವಿರಿ’ ಮುಂತಾದ ಜಾಗೃತಿ ಫಲಕಗಳೊಂದಿಗೆ ಕರ‍್ಯಕ್ರಮದಲ್ಲಿ ಪಾಲ್ಗೊಂಡರು.


ನಂತರ 100ಕ್ಕೂ ಅಧಿಕ ಚೀಲಗಳಲ್ಲಿ ಸಂಗ್ರಹವಾದ ಕಸವನ್ನು ನಗರಸಭೆಯ ವಾಹನದಲ್ಲಿ ಕಳಿಸಿ ವಿಲೇವಾರಿ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ ಡಿ, ಕಾಲೇಜಿನ ಎನ್‌ಸಿಸಿ ಅಧಿಕಾರಿ ಅರುಣ್ ಕುಮಾರ್, ಸಂಯೋಜಕರುಗಳಾದ ತ್ರಿವೇಣಿ, ಶ್ರೀಧರ, ವಿರನ್, ಸ್ವಾತಿ ಹಾಗೂ ಉಪನ್ಯಾಸಕ ವರ್ಗದವರು ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಪಾಲ್ಗೊಂಡರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!