ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹೊಯ್ಗೆ ಗುಡ್ಡೆ ನಿವಾಸಿ ರಮೇಶ್ ಸುವರ್ಣ ಪಡುತೋಟ ಹೃದಯಾಘಾತದಿಂದ ನಿಧನ

ಮುಲ್ಕಿ: ಇಲ್ಲಿಗೆ ಸಮೀಪದ ಪಡುಪಣಂಬೂರು ಹೊಯ್ಗೆ ಗುಡ್ಡೆ ನಿವಾಸಿ ರಮೇಶ್ ಸುವರ್ಣ ಪಡುತೋಟ(68) ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರು ಪಡುಪಣಂಬೂರು ಹೊಯ್ಗೆಗುಡ್ಡೆ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ,ಮುಲ್ಕಿ ಸೀಮೆಯ ಅರಸು ಕಂಬಳ ಸಮಿತಿಯ ಸದಸ್ಯರಾಗಿ, ಪಡುತೋಟ ಶ್ರೀ ಜಾರಂದಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ, ಪಡುಪಣಂಬೂರು ಗ್ರಾ ಪಂ ನ ಮಾಜೀ ಸದಸ್ಯ, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ,ವಿವಿಧ ಸಾಮಾಜಿಕ ಸೇವಾ ಸಂಸ್ಥೆಗಳ ಜೊತೆ ತಮ್ಮನ್ನು ತಾವು ಗುರುತಿಸಿಕೊಂಡು ಜನಾನುರಾಗಿಯಾಗಿದ್ದರು.


ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಮುಂಬೈ ಬಂಟರ ಸಂಘದ ಮಾಜೀ ಅಧ್ಯಕ್ಷ ಭುಜಂಗ ಶೆಟ್ಟಿ, ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಪಡುಪಣಂಬೂರು, ಮುಲ್ಕಿ ಅರಸು ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಗ್ರಾ.ಪಂ.ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮನಾಥ್ ತೋಕೂರು,ಮಾಜೀ ಅಧ್ಯಕ್ಷ ವಿನೋದ್ ಸಾಲ್ಯಾನ್, ಮೋಹನ್ ದಾಸ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ದಿನೇಶ್ ಸುವರ್ಣ , ಗೌತಮ್ ಜೈನ್ ಮುಲ್ಕಿ ಅರಮನೆ, ಸೇವಾದಳದ ಧರ್ಮಾನಂದ ಶೆಟ್ಟಿಗಾರ್, ಪತ್ರಕರ್ತ ಪುನೀತ್ ಕೃಷ್ಣ,ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!