ಜನ ಮನದ ನಾಡಿ ಮಿಡಿತ

Advertisement

ಒಂದೇ ಕ್ಲಾಸಿನಲ್ಲಿ 5 ಅವಳಿಜವಳಿ ಜೋಡಿ: ಸಹಪಾಠಿಗಳಿಗೆ ಫುಲ್ ಕನ್ಫ್ಯೂಸ್…..!!

ಬಂಟ್ವಾಳ: ವಿಶೇಷ ಎಂಬಂತೆ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ.

ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ. ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ.ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!