ದವಡೆ ಹಾಗೂ ಥೈರಾಯಿಡ್ ಕಾಯಿಲೆಯ ಕ್ಲಿಷ್ಟಕರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದ ಇಬ್ಬರು ಮಹಿಳೆಯರಿಗೆ ಕಣಚೂರು ಆಸ್ಪತ್ರೆಯ ವೈದ್ಯರ ತಂಡವು ಅಪರೂಪದ ಶಸ್ತ್ರಚಿಕಿತ್ಸೆಯನ್ನು ನಡೆಸುವುದರ ಮೂಲಕ ಯಶಸ್ವಿಯಾಗಿದೆ ಎಂದು ಕಣಚೂರು ಮೆಡಿಕಲ್ ಕಾಲೇಜು ಅಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹೇಳಿದರು. ಅವರು ಮಂಗಳವಾರ ಕಣಚೂರು ಮೆಡಿಕಲ್ ಆಸ್ಪತ್ರೆ ಸೆಮಿನಾರ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.




