ಜನ ಮನದ ನಾಡಿ ಮಿಡಿತ

Advertisement

ಭರದಿಂದ ಸಾಗಿದೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ; ಜ. 17ರಿಂದ 25ರವರೆಗೆ ಬ್ರಹ್ಮಕಲಶಕ್ಕೆ ಸಿದ್ಧತೆ

ಬಂಟ್ವಾಳ: ನೇತ್ರಾವತಿ ಕಿನಾರೆಯಲ್ಲಿ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಸುಮಾರು 7 ಕೋ.ರೂ.ವೆಚ್ಚದಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಧಾನ ಗರ್ಭಗುಡಿ, ತೀರ್ಥಮಂಟಪದ ಮೇಲ್ಛಾವಣಿಗೆ ತಾಮ್ರದ ಹೊದಿಕೆಯ ಕಾರ್ಯ ಪೂರ್ಣಗೊಂಡಿದ್ದು, 2024ರ ಜ. 17ರಿಂದ 25ರವರೆಗೆ ಕ್ಷೇತ್ರದ ಬ್ರಹ್ಮಕಲಶೋತ್ಸವ ನೆರವೇರಲಿದೆ.


ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಆಗಮ ಶಾಸ್ತ್ರಕ್ಕೆ ಪೂರಕವಾಗಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಸುಮಾರು 2.5 ಕೋ.ರೂ.ಗಳ ಕಾಮಗಾರಿಗಳು ಪೂರ್ಣಗೊಂಡಿದೆ. ಸುತ್ತಪೌಳಿಯ ಶಿಲಾಮಯ ಗೋಡೆಗಳು ಬಹುತೇಕ ಪೂರ್ಣಗೊಂಡಿದ್ದು, ಮೇಲ್ಛಾವಣಿಯ ದಾರುಶಿಲ್ಪದ ಕಾರ್ಯ ಪ್ರಗತಿಯಲ್ಲಿದೆ.


ಧ್ವಜಸ್ತಂಭದ ತೈಲಾಧಿವಾಸ ನಡೆದಿದ್ದು, ಪ್ರಸ್ತುತ ಪ್ರತಿನಿತ್ಯವೂ ಭಕ್ತರು ಎಳ್ಳೆಣ್ಣೆ ಸಮರ್ಪಿಸುತ್ತಿದ್ದಾರೆ. ಪ್ರಧಾನ ಗರ್ಭಗುಡಿಯ ಮೇಲ್ಛಾವಣಿಗೆ ತಾಮ್ರದ ಹೊದಿಕೆಗೆ ಪ್ರತಿ ಮನೆಯ ಭಕ್ತರ ಸೇವೆ ಸಂದಾಯವಾಗಬೇಕು ಎನ್ನುವ ನಿಟ್ಟಿನಲ್ಲಿ ಕೂಪನ್‌ಗಳನ್ನು ನೀಡಲಾಗಿದ್ದು, ಜತೆಗೆ ಸ್ವರ್ಣಲೇಪಿತ ಪ್ರಧಾನ ಕಲಶಕ್ಕೂ ಪ್ರತಿ ಭಕ್ತರ ಸೇವೆಯ ನಿಟ್ಟಿನಲ್ಲಿ ದೇವಸ್ಥಾನದಲ್ಲಿ ಪ್ರತ್ಯೇಕ ಕಾಣಿಕೆ ಡಬ್ಬಿಯನ್ನಿಟ್ಟು ಭಕ್ತರ ಇಚ್ಛಾನುಸಾರ ಕಾಣಿಕೆ ನೀಡಲು ಜೀರ್ಣೊದ್ಧಾರ ಸಮಿತಿ ಅವಕಾಶ ಕಲ್ಪಿಸಿದೆ.


ಮುಂದಿನ ದಿನಗಳಲ್ಲಿ ಹನುಮಂತ ದೇವರ ಗುಡಿ, ನಾಗದೇವರ ಬನ, ಪರಿವಾರ ದೈವಗಳ ಗುಡಿಗಳು, ವಸಂತ ಮಂಟಪ ಮೊದಲಾದ ಕಾಮಗಾರಿಗಳು ಶೀಘ್ರ ಪ್ರಾರಂಭಗೊಳ್ಳಲಿದೆ. ವಾಸ್ತು ಶಿಲ್ಪಿ ಮಹೇಶ್ ಮುನಿಯಂಗಳ ಅವರ ನೇತೃತ್ವದಲ್ಲಿ ವಾಸುಶಿಲ್ಪದ ಕೆಲಸಗಳು ನಡೆಯುತ್ತಿದ್ದು, ಸಂಸದರು, ಶಾಸಕರು, ಮಾಜಿ ಸಚಿವರು, ಹಲ್ಸನಾಡು ಮನೆತನದ ಧನಿಗಳ ಗೌರವಾಧ್ಯಕ್ಷೆಯ ಜೀರ್ಣೋದ್ಧಾರ ಸಮಿತಿಯಲ್ಲಿ ಡಾ.ಎಂ.ಮೋಹನ್ ಆಳ್ವ ಸಂಚಾಲಕರಾಗಿ, ಎಂ.ಎಸ್.ಶೆಟ್ಟಿ ಸರಪಾಡಿ ಅಧ್ಯಕ್ಷರಾಗಿ, ಜಗನ್ನಾಥ ಚೌಟ ಬದಿಗುಡ್ಡೆ ಮಾಣಿ ಕಾರ್ಯಾಧ್ಯಕ್ಷರಾಗಿ ಇತರ ಪದಾಧಿಕಾರಿಗಳು, ಸದಸ್ಯರ ತಂಡ ಜೀರ್ಣೋದ್ಧಾರ ಕಾರ್ಯದ ಯಶಸ್ಸಿನಲ್ಲಿ ಶ್ರಮಿಸುತ್ತಿದೆ.


ಒಂದೆಡೆ ಶಿಲಾಮಯ ದೇವಾಲಯ ನಿರ್ಮಾಣಕ್ಕಾಗಿ ಕಲ್ಲಿನ ಕೆಲಸಗಳು, ದಾರುಶಿಲ್ಪದ ಕೆಲಸಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಪ್ರತಿನಿತ್ಯವೂ ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಶ್ರಮದಾನ ಕಾರ್ಯ ನಡೆಯುತ್ತಿದೆ.

ಹೆಚ್ಚಿನ ಕೆಲಸಗಳಿಗೆ ಭಕ್ತರ ಶ್ರಮದಾನ ಸಹಕಾರ ಲಭಿಸಿದ ಪರಿಣಾಮ ಜೀರ್ಣೋದ್ಧಾರ ಕಾರ್ಯಗಳು ಸರಾಗವಾಗಿ ನಡೆದುಕೊಂಡು ಹೋಗುವುದಕ್ಕೆ ಸಹಕಾರಿಯಾಗಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!