ಜನ ಮನದ ನಾಡಿ ಮಿಡಿತ

Advertisement

ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.


ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಬಿ.,ಪತ್ರಾಂಕಿತ ವ್ಯವಸ್ಥಾಪಕರಾದ ನರೇಶ್ ನಾಯಕ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸೌಮ್ಯ ಎನ್.,ನಗರ ಪುನರ್ವಸತಿ ಕಾರ್ಯಕರ್ತೆ ಕುಮಾರಿ ಸವಿತಾ, ಕ.ರಾ.ಸ.ನೌ.ಸಂಘದ ಅಧ್ಯಕ್ಷ ನಾಗೇಶ್ ಎಸ್. ರವರು ಉಪಸ್ಥಿತರಿದ್ದರು.


ಬಿ.ಐ.ಈ.ಆರ್.ಟಿ ಸುಶೀಲಾರವರು ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು. ಬಿ.ಐ.ಈ.ಆರ್.ಟಿ. ಜ್ಯೋತಿ ಡಿಸೋಜ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದ್ದರು. ಬಿ.ಐ.ಈ.ಆರ್.ಟಿ. ಫ್ಲೇವಿ ಡಿಸೋಜ ಕಾರ್ಯಕ್ರಮ ನಿರೂಪಿಸಿದ್ದರು.ಸಿ.ಆರ್.ಪಿ‌ಗಳಾದ ಆದರ್ಶ, ದಿನಕರ, ಮಹೇಶ್ವರಿ ಎನ್.,ನಾಗರತ್ನ ಶಿರೂರು ಸಹಕರಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!