ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮoಗಳೂರು ಇದರ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸಮರ್ಥ ಸಾರಥ್ಯದಲ್ಲಿ ವಿಶ್ವ ಬಂಟರ ಸಮ್ಮೇಳನ -2023 ರ ಪ್ರಯುಕ್ತ ಅ.28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅ.29ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಕರಪತ್ರ ಹಾಗೂ ಬಿತ್ತಿಪತ್ರವನ್ನು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ. ಸುಬ್ಬಯ್ಯ ರೈ ಯವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ, ಸುಬ್ಬಣ್ಣ ಆಳ್ವ ಅಧ್ಯಕ್ಷರು ಕಾಸರಗೋಡು ವಲಯ ಬಂಟರ ಸಂಘ, ಪದ್ಮನಾಭ ಶೆಟ್ಟಿ ಅಧ್ಯಕ್ಷರು ಕುಂಬ್ಳೆ ಫಿರ್ಕ ಬಂಟ್ಸ್ ಸರ್ವಿಸ್ ಸೊಸೈಟಿ ಬದಿಯಡ್ಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ಚಂದ್ರಹಾಸ್ ಡಿ ಶೆಟ್ಟಿ ರಂಗೋಲಿ,ಕಾಸರಗೋಡು ಜಿಲ್ಲಾ ಬಂಟರ ಸಂಘದ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



