ಜನ ಮನದ ನಾಡಿ ಮಿಡಿತ

Advertisement

ಕೇಳುವವರೇ ಇಲ್ಲ ರಾಜ್ಯದ ಜನತೆಯ ದುಸ್ಥಿತಿ; ಶಾಸಕ ವೇದವ್ಯಾಸ್‌ ಕಾಮತ್‌

ರಾಜ್ಯ ಕಾಂಗ್ರೆಸ್ಸಿನ ಆಡಳಿತದಲ್ಲಿ ಜನರ ಪರಿಸ್ಥಿಯು ಹೇಳತೀರದಾಗಿದ್ದು, ಈ ಬಗ್ಗೆ ಸರ್ಕಾರ ಗಮನವೇ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರ ದುಸ್ಥಿತಿ ಹೇಳತೀರದಾಗಿದ್ದು, ಇದು ಕಾಂಗ್ರೆಸ್‌ ಸರ್ಕಾರದ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು.

ನಗರದ R.T. O, ಮಹಾನಗರ ಪಾಲಿಕೆ ಕಛೇರಿ, ಉಪ ನೋಂದಣಿ ಕಛೇರಿ, ರೇಷನ್ ಕಾರ್ಡ್ ತಿದ್ದುಪಡಿ ಹೀಗೆ ಅಗತ್ಯ ಕಾರ್ಯಗಳಿಗಾಗಿ ಸರ್ಕಾರಿ ಕಛೇರಿಗೆ ಬರುವ ಜನರಿಗೆ ಸರ್ವರ್ ಸಮಸ್ಯೆ ಎಂಬುದು ಸಾಮಾನ್ಯವಾಗಿಬಿಟ್ಟಿದೆ. ಜನಸಾಮಾನ್ಯರು ತಮ್ಮ ಎಲ್ಲ ಕೆಲಸಗಳನ್ನು ಬಿಟ್ಟು ಪ್ರತಿ ದಿನ ಸರ್ಕಾರಿ ಕಛೇರಿಗಳಿಗೆ ಅಲೆಯುವಂತಾಗಿದ್ದು ಸರ್ಕಾರದ ಅವ್ಯವಸ್ಥೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಇದರ ಜೊತೆಗೆ ಇ-ಖಾತಾ ಸಮಸ್ಯೆಯೂ ಸೃಷ್ಟಿಯಾಗಿದ್ದು ಒಂದು ಇ – ಖಾತಾ ಸಿಗಲು 3 ತಿಂಗಳವರೆಗೆ ಕಾಯಬೇಕಿತ್ತು. ನಿವೇಶನ, ಫ್ಲ್ಯಾಟ್‌ ನೋಂದಣಿಗಾಗಿ ಮಂಗಳೂರು ಮಿನಿ ವಿಧಾನಸೌಧದ ಉಪನೋಂದಣಿ ಕಚೇರಿಗೆ ಹೋಗಿ ಬಯೋಮೆಟ್ರಿಕ್‌ ನೀಡುತ್ತಿರುವ ಹಲವು ಜನರ ಬ್ಯಾಂಕ್‌ ಖಾತೆಗೆ ಸೈಬರ್‌ ವಂಚಕರು ಕನ್ನ ಹಾಕಿದ್ದು ಲಕ್ಷಾಂತರ ರೂಪಾಯಿ ವಂಚಿಸಿದ್ದರೂ ಜಿಲ್ಲಾಡಳಿತ ಹಾಗೂ ಸರ್ಕಾರ ಈ ವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಕೂಡಲೇ ಈ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಬಿಟ್ಟು ಗಮನಹರಿಸಬೇಕು. ಮತ್ತು ಸರ್ಕಾರಿ ಕಛೇರಿಗೆ ಬಂದು ಸರ್ಕಾರದ ನಿಯಮಗಳನ್ನು ಪಾಲಿಸಿದ ಮೇಲೆಯೇ ಸಾರ್ವಜನಿಕರ ಮಾಹಿತಿ ಸೋರಿಕೆಯಾಗಿ ವಂಚನೆಗೊಳಗಾಗಿದ್ದರಿಂದ ಸಾರ್ವಜನಿಕರಿಗೆ ಉಂಟಾದ ನಷ್ಟವನ್ನು ಸರ್ಕಾರವೇ ಭರಿಸಿಕೊಡಬೇಕು ಎಂದರು.

ಉಚಿತ ಕರೆಂಟ್ ಕೊಡುತ್ತೇವೆ ಎಂದು ಹೇಳಿ ಕರೆಂಟ್ ಬಿಲ್ ಹೆಚ್ಚಳ ಮಾಡಿದ್ದಲ್ಲದೇ ಈಗ ಲೋಡ್ ಶೆಡ್ಡಿಂಗ್ ಆರಂಭಿಸಿ ಜನರನ್ನು ಕತ್ತಲೆಗೆ ದೂಡಲಾಗಿದೆ. ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಉಚಿತ ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಎಸ್ಸಿ.ಎಸ್ಟಿ ಸಮುದಾಯಕ್ಕೆ ನಿಗದಿ ಪಡಿಸಿದ್ದ 11,000 ಕೋಟಿ ರೂಪಾಯಿಗಳನ್ನು ಹಣ ದುರ್ಬಳಕೆ ಮಾಡಲಾಗುತ್ತಿದೆ. ವೃದ್ದರಿಗೆ, ಅಸಹಾಯಕರಿಗೆ ವರದಾನವಾಗಿದ್ದ ಸಂಧ್ಯಾ ಸುರಕ್ಷಾ, ಮನಸ್ವಿನಿ, ವಿಧವಾ ವೇತನಗಳ ಸಹಾಯಧನದಲ್ಲಿ ವ್ಯತ್ಯಯ ಉಂಟಾಗಿದ್ದು ಕ್ಷೇತ್ರದ ಜನ ಈ ಅವ್ಯವಸ್ಥೆ ಬಗ್ಗೆ ನನ್ನ ಗಮನಕ್ಕೂ ಬಂದಿದ್ದು, ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದರು. ಇದೇ ವೇಳೆ ಶಿವಮೊಗ್ಗದಲ್ಲಿ ಈದ್ ವಿಲಾದ್‌ ಮೆರವಣಿಗೆ ವೇಳೆ ನಡೆದ ಗಲಭೆಗೆ ಕಾಂಗ್ರೆಸ್‌ ಸರ್ಕಾರದ ವೈಫಲ್ಯವೇ ಕಾರಣ ಎಂದರು.

ತಮ್ಮ ಅಕ್ರಮಗಳನ್ನು ಯಾರೂ ಪ್ರಶ್ನಿಸದ ಹಾಗೆ ಮಾಡಲು ಮಾಹಿತಿ ಹಕ್ಕು ಹೋರಾಟಗಾರರ ವಿವರಗಳನ್ನು ಪಡೆಯಲು ಸರ್ಕಾರ ಯತ್ನಿಸಿದ್ದು ತೀವ್ರ ಜನಾಕ್ರೋಶ ಹಾಗೂ ವಿರೋಧ ಪಕ್ಷಗಳ ವಿರೋಧದಿಂದ ಸರ್ಕಾರ ಅನಿವಾರ್ಯವಾಗಿ ಹಿಂದೆ ಸರಿದಿದೆ. ಹೀಗೆ ಸಮಸ್ಯೆಗಳ ಪಟ್ಟಿಯ ಸರಮಾಲೆಯೇ ಇದ್ದು, ಸರ್ಕಾರ ಈ ಕೂಡಲೇ ಅಗತ್ಯ ಕ್ರಮ ಕೈಗೊಂ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!