ಜನ ಮನದ ನಾಡಿ ಮಿಡಿತ

Advertisement

ಬಜಪೆ ಪೊಲೀಸರ ಕಾರ್ಯಾಚರಣೆ; ವಿವಿಧ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 5 ಜನರ ಬಂಧನ

ಬಜಪೆ:ಬಜಪೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಂಜಾರು ಗ್ರಾಮದ ಪೋರ್ಕೊಡಿ,ಕೊಳಂಬೆ ಫನಾ ಕಾಲೇಜು ಬಳಿ ಹಾಗೂ ಕಂದಾವರ ಗ್ರಾಮದ ಅದ್ಯಪಾಡಿ ದ್ವಾರದ ಬಳಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಐವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪೋರ್ಕೊಡಿ ನಿವಾಸಿ ಮೊಹಮ್ಮದ್ ಮುನಾಜ್, ಕಸಬಾ ಬೆಂಗ್ರೆಯ ನಿವಾಸಿ ಮೊಹಮ್ಮದ್ ಆಫ್ರಾರ್, ಬಡಗುಳಿಪಾಡಿ ಗ್ರಾಮದ ನಿವಾಸಿ ರಾಹಿಲ್ ಮೊಯಿದ್ದೀನ್‌ ಶರೀಫ್‌, ಮೂಡುಪೆರಾರ ಗ್ರಾಮದ ಗುರುಕಂಬಳದ ನಿವಾಸಿ ಮುಲ್ಲಾ ಅಬ್ದುಲ್‌ ಅಮನ್ ಮತ್ತು ಕಂದಾವರ ಗ್ರಾಮದ ಅಮಾನುಲ್ಲಾ ಕಂಪೌಂಡ್ ನಿವಾಸಿ ಮೊಹಮ್ಮದ್ ಶಾಹಿನ್ ಎಂದು ಗುರುತಿಸಲಾಗಿದೆ.

ಪೊಲೀಸರುಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪರೀಕ್ಷಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುದರಿಂದ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರವನ್ನು ಮಾದಕ ವಸ್ತು ಮುಕ್ತ ನಗರವನ್ನಾಗಿ ಮಾಡಲು ದೃಢನಿರ್ಧಾರವನ್ನು ಕೈಗೊಂಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ IPS, ಡಿ.ಸಿ.ಪಿಯವರಾದ ಸಿದ್ಧಾರ್ಥ ಗೋಯಲ್‌, ದಿನೇಶ್‌ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ರವರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!