ಉಡುಪಿ; ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆ ಆಶ್ರಯದಲ್ಲಿ 23ನೇ ವರ್ಷದ ನವರಂಗೋತ್ಸವ ಹಾಗೂ ಚಿಣ್ಣರ ಯಕ್ಷಾಂಗಣ ಇದೇ ಬರುವ ಅ.15 ರಿಂದ 23ರ ವರೆಗೆ ನಾಟ್ಕದೂರು ಬಿ.ವಿ ಕಾರಂತ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ ಎಂದು ನಮ ತುಳುವೆರ್ ಕಲಾ ಸಂಘಟನೆ ಅಧ್ಯಕ್ಷ ಸುಕುಮಾರ್ ಮೋಹನ್ ಹೇಳಿದ್ದಾರೆ.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಸಂಜೆ 7 ಗಂಟೆಗೆ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಾಸ್ತುತಜ್ಞ ಪ್ರಮಲ್ ಕುಮಾರ್, ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಭಿಮತ ಟಿವಿಯ ಮುಖ್ಯಸ್ಥೆ ಡಾ.ಮಮತಾ ಪಿ. ಶೆಟ್ಟಿ, ಉದ್ಯಮಿ ಪ್ರಸಾದ್ ಕಾಂಚನ್, ಬೆಳಗಾವಿಯ ರವಿ ಕೋಟೆಯರಗಸ್ತಿ, ಡಾ. ಸರಜು ಕಾಡ್ಕರ್, ಹರೀಶ್ ಸಾಲಿಯಾನ್ ಬಜೆಗೋಳಿ, ಪ್ರಸಾದ್ ಆಚಾರ್ಯ ಬಜೆಗೋಳಿ, ಸುಂದರ ಕುಮಾರ್ ಮುಂಬೈ ಅವರಿಗೆ ಕರ್ನಾಟಕ ನಾಡಪೋಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಅಂತ ಮಾಹಿತಿ ನೀಡಿದ್ದಾರೆ.
ಇನ್ನೂ ಅ.23ರಂದು ಸಂಜೆ 7ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ರಂಗನಿರ್ದೇಶಕ ರಾಮ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಥ್ವಿನ್ ಅಜೆಕಾರು ಅವರಿಗೆ ಬಿ.ವಿ ಕಾರಂತ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಅಂತ ಹೇಳಿದ್ರು. ಈ ಸಂದರ್ಭದಲ್ಲಿ ಸಂಘಟನೆ ಸದಸ್ಯರಾದ ಉಮೇಶ್



