ಜನ ಮನದ ನಾಡಿ ಮಿಡಿತ

Advertisement

ಅರಬೀ ಸಮುದ್ರದಲ್ಲಿ ಚಂಡಮಾರುತ ಭೀತಿ; ಅ.20ರವರೆಗೆ ಮೀನುಗಾರಿಕೆ ನಿಷೇಧ

ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ.


ಚಂಡಮಾರುತದ ಅವಧಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ. ಹೀಗಾಗಿ ಸಮುದ್ರ ತೀರದಲ್ಲಿ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ತುರ್ತು ಸಂದರ್ಭದಲ್ಲಿ ಸೇವೆಗಾಗಿ ಶುಲ್ಕ ರಹಿತ:1077 ಅಥವಾ ದೂರವಾಣಿ ಸಂಖ್ಯೆ:0820-2574802ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!