ಹಿಟ್ ಅಂಡ್ ರನ್ ಪ್ರಕರಣ ನಡೆದು ಯುವತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಲೇಡಿ ಹಿಲ್ ಮಣ್ಣಗುಡ್ಡ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ(23) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ ಎಂದು ಗುರುತಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾ ದಲ್ಲಿ ಸೆರೆಯಾಗಿದ್ದು, ಆರೋಪಿ ಚಾಲಕ ಕಮಲೇಶ್ ಬಲದೇವ್ ನನ್ನು ಬಂಧಿಸಲಾಗಿದೆ.



