ಜನ ಮನದ ನಾಡಿ ಮಿಡಿತ

Advertisement

ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ವಿಚಾರ; ರಾಜ್ಯ ಸರಕಾರ ಹೊರಡಿಸಿದ ಸುತ್ತೋಲೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ; ಬಿಜೆಪಿ ಮುಖಂಡ ಪ್ರಭಾಕರ ಪ್ರಭು

ಬಂಟ್ವಾಳ: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ ಸುತ್ತೋಲೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದು,ಕರ್ನಾಟಕ ಕಾಂಗ್ರೆಸ್ ಸರಕಾರದ ಈ ಧೋರಣೆಯನ್ನು ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಖಂಡಿಸಿದ್ದಾರೆ.

ಈ ಕುರಿತು‌ ಕರ್ನಾಟಕ ಸರಕಾರದ ಮುಖ್ಯ‌ಕಾರ್ಯದರ್ಶಿಯವರಿಗೆ ಲಿಖಿತ ಪತ್ರ ಬರೆದಿರುವ ಅವರು, ಈ ಆದೇಶವನ್ನುತಕ್ಷಣದಿಂದ ವಾಪಾಸ್ ಪಡೆದು ಅನಾದಿಕಾಲದಿಂದಲೂ ಹಿಂದೂ ಧಾರ್ಮಿಕ ಪದ್ದತಿಯಂತೆ ಆಯುಧಪೂಜೆಯನ್ನು ಯಥಾವತ್ತಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು‌ ಎಂದು‌ ಆಗ್ರಹಿಸಿದ್ದಾರೆ.
ಕುಂಕುಮ, ವಿಭೂತಿ ಇವಗಳೆಲ್ಲವನ್ನು ಹಿಂದೂ ಧರ್ಮದ ಆಚರಣೆಗಳಲ್ಲಿ ಬಳಕೆ ಮಾಡಿ ಬಳಿಕ ಭಕ್ತರಿಗೆ ಹಂಚುವ ಕ್ರಮ ಪುರಾತನದಿಂದಲೂ ನಡೆದು ಕೊಂಡು ಬಂದಿರುವ ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಿ ಆಯುಧ ಪೂಜೆ ನೆರವೇರಿಸಲು ಮುಂದಾಗಿರುವ ಸರಕಾರದ ಕ್ರಮ ಸಮಂಜಸವಲ್ಲ ಎಂದು ಪ್ರಭು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಮುಂದುವರಿದರೆ ಕ್ಷುಲ್ಲಕ ನೆಪವೊಡ್ಡಿ ಆಯುಧ ಪೂಜೆಯನ್ನೇ ನಿಷೇಧಿಸಲು ಕಾಂಗ್ರೆಸ್‌ ಸರಕಾರ ಮುಂದಾದರೂ ಅಚ್ಚರಿಪಡಬೇಕಾಗಿಲ್ಲ,ಈ ನಿಟ್ಟಿನಲ್ಲಿ‌ಸಮಸ್ತ ಹಿಂದೂ ಸಮಾಜದ
ಪರವಾಗಿ ಈ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!