ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಅಲೋಕ್ ಮೋಹನ್ ಐಪಿಎಸ್‌ರವರಿಗೆ ಹಾಗೂ ಗೃಹ ಸಚಿವರಾದ, ಡಾ ಜಿ.ಪರಮೇಶ್ವರ್‌ರವರಿಗೆ ಆಮಂತ್ರಣ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ -2023 ಕಾರ್ಯಕ್ರಮವು ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ,ಐಪಿಎಸ್ ಇವರನ್ನು ಗೌರವದಿಂದ ಆಹ್ವಾನಿಸಿದ್ದಾರೆ. ಅಹ್ವಾನ ಸ್ವೀಕರಿಸಿದ ಸನ್ಮಾನ್ಯರು ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.

ಅಂತೆಯೇ ಕರ್ನಾಟಕ ಸರಕಾರದ ಗೃಹ ಸಚಿವರಾದ, ಡಾ ಜಿ. ಪರಮೇಶ್ವರ್‌ರವರನ್ನು ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ ಮುಂಬೈ, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ್ ರೈ, ಹಾಗೂ ರಾಮ್ ಪ್ರಸಾದ್‌ರವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!