ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮೂಡುಬಿದಿರೆ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ; ಸಾಧಕರಿಗೆ ಗೌರವ ಪುರಸ್ಕಾರ ಪ್ರದಾನ

ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ) ಇದರ ವತಿಯಿಂದ ನಡೆದ ಮೂಡುಬಿದಿರೆ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ನಾಲ್ಕನೇ ದಿನದಂದು ಹಿರಿಯ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಮೂಡುಬಿದಿರೆಯ ಖ್ಯಾತ ತಜ್ಞ ವೈದ್ಯ ಡಾ.ಹರೀಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಯಕ್ಷಗಾನ-ಸ್ವರೂಪ ಮತ್ತು ನಾವೀನ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಜೋಶಿ ಅವರು ಜಗತ್ತಿನ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದು. ಇಂದಿನ ದಿನಗಳಲ್ಲಿ ಯಕ್ಷಗಾನದಲ್ಲೂ ಆಧುನಿಕತೆ ಹಾಸು ಹೊಕ್ಕಿದೆ. ಯಕ್ಷಗಾನ ಕಲೆಯು ಅಭಿವೃದ್ಧಿಯಾಗಬೇಕು ಆದರೆ ಅದು ಜನಾಕರ್ಷಣೆಯಾಗಬೇಕೆಂದು ಕಲೆಯನ್ನು ಬಲಿಕೊಡಬಾರದು. ಕೆಟ್ಟ ಸಂಗತಿಗಳು ವೈರಸ್ ನಂತೆ ಒಳ ಹೊಕ್ಕರೆ ಅದು ಹೊರಗೆ ಬರಲು ಕಷ್ಟಸಾಧ್ಯ ಇದನ್ನು ಯಕ್ಷಗಾನ ಮೇಳದ ಯಜಮಾನರುಗಳು, ಕಲಾವಿದರು ಮತ್ತು ಪ್ರೇಕ್ಷಕರು ಅರಿತುಕೊಳ್ಳಬೇಕಾಗಿದೆ. ದೇವಸ್ಥಾನದ ಸುಪರ್ದಿಯಲ್ಲಿ ಬರುವಂತಹ ಮೇಳಗಳು ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ಸಮಾಜ ಮಂದಿರ ಗೌರವ 2023 ಪುರಸ್ಕಾರ ಪ್ರದಾನ : ಮೂಡುಬಿದಿರೆಯ ವಿವಿಧ ರಂಗಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವ ರಾಮಕೃಷ್ಣ ಶಿರೂರು (ಶಿಕ್ಷಣ, ಸಂಘಟನೆ) ಸಿಸ್ಟರ್ ಪ್ರೆಸಿಲ್ಲಾ (ಅನಾಥರ ಸೇವೆ) – ಶ್ರೀಮತಿ ಸಂಧ್ಯಾ (ಪರಿಸರ, ಶೂನ್ಯ ತ್ಯಾಜ್ಯ ಕಾಳಜಿ),ಎಸ್. ಸುರೇಂದ್ರ ಪೈ ಪುತ್ತಿಗೆ (ಯಕ್ಷಗಾನ ಚಿಕ್ಕಮೇಳ), ಕು. ಪ್ರೇಮಶ್ರೀ ಕಲ್ಲಬೆಟ್ಟು (ಪತ್ರಿಕೋದ್ಯಮ) ಧೀರಜ್ ಕುಮಾರ್ ಕೊಳ್ಕೆ(ಸಮಾಜ ಸೇವೆ) ಇವರಿಗೆ ಸಮಾಜ ಮಂದಿರ ಗೌರವ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.


ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಸಂಚಾಲಕ ಡಾ.ಪುಂಡಿಕೈ ಗಣಪಯ್ಯ ಭಟ್, ಸಮಾಜ ಮಂದಿರ ಸಭಾದ ಟ್ರಸ್ಟಿಗಳು ಉಪಸ್ಥಿತರಿದ್ದರು.


ಪತ್ರಕರ್ತ ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಸಮಾಜ ಮಂದಿರ ಸಭಾದ ಜತೆ ಕಾರ್ಯದರ್ಶಿ ಎಂ.ಗಣೇಶ್ ಕಾಮತ್ ಪುರಸ್ಕೃತರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಎಂ.ರೂಪೇಶ್ ಕುಮಾರ್ ನಿರ್ದೇಶನದಲ್ಲಿ ಟಾಪ್ ಎಂಟರ್ ಟೈನರ್ಸ್ ಡ್ಯಾನ್ಸ್ ಅಕಾಡೆಮಿ ಮೂಡುಬಿದಿರೆ ಇವರಿಂದ ‘ನೃತ್ಯ ವೈವಿಧ್ಯ’ ಪ್ರಸ್ತುತಗೊಂಡಿತು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!