ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದ ಸಭೆ

ಕಿನ್ನಿಗೋಳಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದ ಸಭೆ, ಮನೆ ಮನೆ ಜಾಥಾ ಕಾರ್ಯಕ್ರಮ ಹಾಗೂ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆಯು ಮುಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ನಲ್ಲಿ ಅ. 21 ರಂದು ಪಂಚಾಯತ್ ಅಧ್ಯಕ್ಷರಾದ ಮಯ್ಯದ್ದಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಎನ್‌ ಆರ್‌ಎಲ್‌ಎಮ್ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದಡಿ ನರೇಗಾ ಯೋಜನೆಯ ಕೈಗೊಳ್ಳಬಹುದಾದ ವಿವಿಧ ಕಾಮಗಾರಿ ಹಾಗೂ ತೋಟಗಾರಿಕಾ ಬೆಳೆಗಳ ಮಾಹಿತಿ ಹಾಗೂ ಮಹಿಳಾ ಭಾಗವಹಿಸುವಿಕೆಯ ಬಗ್ಗೆ ಮಾಹಿತಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ತಾಲೂಕು ಐಇಸಿ ಸಂಯೋಜಕರು ತಿಳಿಸಿದರು.

ಈ ವೇಳೆ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು,ಪಂಚಾಯತ್ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕಸಹಾಯಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಎಂ.ಬಿ.ಕೆ ಸುನೀತಾ, ಎಲ್. ಸಿ. ಆರ್. ಪಿ. ಹಾಗೂ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಭೆಯ ಬಳಿಕ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದಡಿ ಜಾಥಾ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!