ಜನ ಮನದ ನಾಡಿ ಮಿಡಿತ

Advertisement

ಬೈಕ್ ಕಳವು : ಅಂತರ್ ಜಿಲ್ಲೆ ಚೋರರನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ.


ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯ ವೀರೇಂದ್ರ ಬಂಧಿತರು.

ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ದ್ವಿಚಕ್ರ ವಾಹನವನ್ನು ನಿಲ್ಲಿಸಲು ಹೇಳಿದಾಗ ವಾಹನವನ್ನು ನಿಲಿಸದೇ ವಾಪಾಸು ಹಿಂತಿರುಗಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸ್ ನಿರೀಕ್ಷಕ ಸಂದೇಶ್ ಹಾಗೂ ಸಿಬ್ಬಂದಿಯವರು ಅವರುಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ KA 47, L 9678 ನೇ ಹೀರೋ ಸೂಪರ್ ಮೋಟಾರು ಸೈಕಲ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಜೈನ್ ಪಿ.ಯು ಕಾಲೇಜಿನ ಎದುರು ಇರುವ ಅರ್ಹತ್ ಅಪಾರ್ಟ್ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ KA-19-HD-4034 ನಂಬರಿನ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳಿಂದ ಒಟ್ಟು ಅಂದಾಜು ಮೌಲ್ಯ 1,80,000/- ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್ IPS (ಕಾ&ಸು), ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಸಿಬಂದಿಗಳು ಕಾರ್ಯಚರಣೆ ನಡೆಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!