ಜನ ಮನದ ನಾಡಿ ಮಿಡಿತ

Advertisement

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಒಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದುವರೆ ತಾಸುಗಳ ಕಾಲ ಟ್ರಾಪಿಕ್ ಸಮಸ್ಯೆ

ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಒಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದುವರೆ ತಾಸುಗಳ ಕಾಲ ಟ್ರಾಪಿಕ್ ಸಮಸ್ಯೆ ಉಂಟಾಗಿದ್ದು,ಪ್ರಯಾಣಿಕರು ಸಿಲುಕಿಕೊಂಡ ಘಟನೆ ನಡೆಯಿತು.


ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ ಅರಫಾ ಬಸ್ ನ ವೀಲ್ ಜಾಮ್ ಉಂಟಾದ ಕಾರಣ ಪಾಣೆಮಂಗಳೂರು ಹೊಸ ಸೇತುವೆ ಮಧ್ಯ ಭಾಗದಲ್ಲಿ ನಿಂತಿತ್ತು. ಸೇತುವೆ ಮಧ್ಯ ಭಾಗದಲ್ಲಿ ಬಸ್ ಕೆಟ್ಟು ನಿಂತ ಪರಿಣಾಮ ಎರಡು ಕಡೆಯಿಂದ ಬರುವ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.ಅನೇಕ ದಿನಗಳಿಂದ ಪಾಣೆಮಂಗಳೂರು ಸೇತುವೆ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿದೆ.


ಇಂದು ಕೂಡ ಸಂಜೆ ಸುಮಾರು 5.30 ರ ವೇಳೆ ಕೆಟ್ಟು ನಿಂತಿದ್ದ ಬಸ್ ಸುಮಾರು 7 ಗಂಟೆವೆರೆಗೆ ಅಲ್ಲೇ ಉಳಿದಿತ್ತು. ಬಳಿಕ ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಒಂದು ಬದಿಗೆ ಎಳೆದ ತಂದು ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು. ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಸಾಮರ್ಥ್ಯದ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಇದೆ. ಕಳೆದ ಬಾರಿ ಹೊಸ ಸೇತುವೆಯಲ್ಲಿ ಬ್ಲಾಕ್ ಆದ ಸಂದರ್ಭದಲ್ಲಿ ಹಳೆಯ ಸೇತುವೆಯಲ್ಲಿ ಪ್ರಯಾಣಿಕ್ಕೆ ಅವಕಾಶ ನೀಡಲಾಗಿತ್ತು.ಆದರೆ ಪ್ರಸ್ತುತ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂಬುದನ್ನು ಇಲಾಖೆ ಅದೇಶ ಹೊರಡಿಸಿದೆ.

ಟ್ರಾಫಿಕ್ ಜಾಮ್ ಉಂಟಾದ ವೇಳೆ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ಎ ಸ್.ಐ.ಸುತೇಶ್ಎ .ಎಸ್.ಐ.ಗಳಾದ ವಿಜಯ್ ,ಸುರೇಶ್ ಪಡಾರ್,ಸಿಬ್ಬಂದಿಗಳಾದ ರಮೇಶ್, ಅಭಿಷೇಕ್ ಸಮಸ್ಯೆ ನಿವಾರಿಸಲು ಹರಸಾಹಸ ಪಟ್ಟರು. ಪೋಲೀಸರು ಕ್ರೇನ್ ತರಿಸಿ ಬಸ್ ನ್ನು ಸ್ಥಳದಿಂದ ತೆರವುಗೊಳಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!