ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ, ರಸ್ತೆಯುದ್ದಕ್ಕೂ ರಕ್ತದ ಕಲೆ!!!

ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಹತ್ಯೆ ಮಾಡಲಾಗಿದ್ದು, ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ ಆಗಮಿಸಿದ ತಂಡಯೊಂದು ಯದ್ವಾತದ್ವ ತಲವಾರ್‌ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ.

ವಿವೇಕಾನಂದ ಕಾಲೇಜ್ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದುವೇ ಸೇಡಾಗಿ ಪರಿಣಮಿಸಿದ ಕಾರಣ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ಸ್ವಲ್ಪ ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಬೆನ್ನಟ್ಟಿಕೊಂಡು ಬಂದು ತಲವಾರಿನಿಂದ ದಾಳಿ ನಡೆಸಿದ್ದಾರೆ.

ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಇನ್ನೊಂದು ಬದಿಯಲ್ಲಿ ಗಿಡ ಮರಗಳಿಂದ ತುಂಬಿದ್ದ ಜಾಗದವರೆಗೂ ಬೆನ್ನಟ್ಟಿ ಹೋಗಿ ಹತ್ಯೆ ನಡೆಸಿರುವುದು ಕಂಡು ಬಂದಿದೆ. ಈ ಕೃತ್ಯವು ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ. ಇನ್ನು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಉಳಿದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅಪಘಾತದ ನಷ್ಟ ಸರಿಪಡಿಸಿಕೊಳ್ಳಲು ಮಾತನಾಡಲೆಂದು : ಅದೇ ತಂಡ ಅಕ್ಷಯ್ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ.

ಒಂದೆರಡು ಸಾವಿರ ರೂಪಾಯಿ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶಂಕೆ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!