ಜನ ಮನದ ನಾಡಿ ಮಿಡಿತ

Advertisement

ಮೋಟರ್ ಸೈಕಲ್ ಕಳ್ಳರಿಬ್ಬರನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು


ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ಎರಡು ರೋಯಲ್ ಎನ್ ಫೀಲ್ಡ್ ಮೋಟಾರು ಸೈಕಲ್ ಗಳನ್ನು ಕಳವು ಮಾಡಿದ್ದ ಕಳ್ಳರಿಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದು, ಅವರಿಂದ ಮೋಟರ್ ಸೈಕಲನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.


ಬಂಧಿತರನ್ನು ಮೂಡುಬಿದಿರೆಯ ಕೋಟೆಬಾಗಿಲು ನಿವಾಸಿಗಳಾದ ಸಯ್ಯದ್ ಝಾಕೀರ್ (೨೦) ಹಾಗೂ ಮೊಹಮ್ಮದ್ ಶಾಹೀಮ್ (೨೪) ಎಂದು ಗುರುತಿಸಲಾಗಿದೆ.


ಮೂಡಬಿದ್ರೆ ಪೊಲೀಸ್ ನಿರೀಕ್ಷಕರಿಗೆ ನ.೭ ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಅವರು ಹಾಗೂ ಠಾಣಾ ಸಿಬ್ಬಂದಿಗಳು ಬೆಳಗಿನ ಜಾವ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇರುವ ಕೊಂಡೆ ಸ್ಟ್ರೀಟ್ ಎಂಬಲ್ಲಿ ಇಬ್ಬರು ಯುವಕರನ್ನು ಹಾಗೂ ಅವರ ವಶದಲ್ಲಿದ್ದ ನಂಬ್ರ ಪ್ಲೇಟ್ ಇಲ್ಲದ ರಾಯಲ್ ಎನ್‌ಫಿಲ್ಡ್ ಕ್ಲಾಸಿಕ್ ೩೫೦ ಮೋಟಾರು ಸೈಕಲಿನ ಸಮೇತ ವಶಕ್ಕೆ ಪಡೆದಿದ್ದಾರೆ.


ಅವರನ್ನು ಕೂಲಂಕುಶವಾಗಿ ತನಿಖೆ ನಡೆಸಿದಾಗ ಅ.೨೪-೨೫ ರ ಮಧ್ಯರಾತ್ರಿ ಮೂಡಬಿದ್ರೆ ಜೈನ್ ಪೇಟೆಯ ಬಡಗ ಬಸದಿ ಎದುರು ಇರುವ ದೇವಿ ಕೃಪಾ ಅಪಾರ್ಟ್ ಮೆಟ್‌ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ, ಆರೋಪಿಗಳು ವಿಚಾರಣೆಯ ವೇಳೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದಲ್ಲಿರುವ ಎವರ್ ಪ್ರೈಸ್ ರೆಸಿಡೆನ್ಸ್, ಅಪಾರ್ಟ್ ಮೆಂಟ್‌ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಕೆಎ-೧೯-ಯುಇ-೦೦೦೯ ನೇ ರಾಯಲ್ ಎನ್‌ಫಿಲ್ಡ್ ಕ್ಲಾಸಿಕ್ ೩೫೦ ಮೋಟಾರು ಸೈಕಲನ್ನು ಕೂಡ ಕಳವು ಮಾಡಿ ಪೇಪರ್ ಮಿಲ್ ಬಳಿ ಇರುವ ಕೀರ್ತಿ ನಗರ ಕ್ರಾಸ್ ಬಳಿ ಪೊದೆಗಳ ಮಧ್ಯೆ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ೩,೦೦,೦೦೦ ರೂ. ಎಂದು ಅಂದಾಜಿಸಲಾಗಿದೆ.
ಕಾರ್ಯಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದಾರ್ಥ ಗೊಯಲ್ ಹಾಗೂ ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂಧಿಯವರಾದ ಮೊಹಮ್ಮದ್ ಇಟ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್ ಮತ್ತು ಚಂದ್ರಹಾಸ ರೈ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!