ಜನ ಮನದ ನಾಡಿ ಮಿಡಿತ

Advertisement

ಹೊಸಂಗಡಿ ಗ್ರಾಮ ವ್ಯಾಪ್ತಿಯಲ್ಲಿ ಅಡಿಕೆ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ

ದಕ್ಷಿಣ ಕನ್ನಡ : ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹೊಸಂಗಡಿಯಲ್ಲಿ ಕೃಷಿ ಮುಂಚೂಣಿ ಪ್ರಾತ್ಯಕ್ಷಿಕೆ 2023-24 ರ ಅಡಿಯಲ್ಲಿ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ದಿ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ಪ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ ಇವರುಗಳ ಸಹಭಾಗಿತ್ವದಲ್ಲಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ. ಕೇದಾರನಾಥ ರವರು ಭಾಗವಹಿಸಿ ಎಲೆ ಚುಕ್ಕೆ ರೋಗದ ಹರಡುವಿಕೆ ಹಾಗೂ ಅದರ ನಿರ್ವಹಣೆ ಕುರಿತು ಮಾಹಿತಿ ನೀಡಿ, ಔಷಧೋಪಚಾರವಾಗಿ (ಪ್ರೋಪಿಕೊನಾಜೊಲ್ 25 % ಇಸಿ @1 ಮಿಲಿ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪರಣೆ ಮಾಡಬೇಕು ಹಾಗೆ 30 ದಿನಗಳ ನಂತರ ಕಾರ್ಬೆಂಡೇಜಿಮ್+ ಮ್ಯಾಂಕೋಜೆಬ್ 75 ಡಬ್ಲ್ಯೂ ಪಿ @ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರಸಿ ಎಲೆ ಹಾಗೂ ಹಿಂಗಾರಕ್ಕೆ ಸಿಂಪರಣೆ ಮಾಡಬೇಕು ಎಂಬ) ಮಾಹಿತಿ ನೀಡಿದರು. ಡಾ.ಮಲ್ಲಿಕಾರ್ಜುನ್ ಎಲ್ ಮಣ್ಣು ವಿಜ್ಞಾನಿಗಳು ಮಣ್ಣು ಪರೀಕ್ಷೆ ಹಾಗೂ ಪೋಷಕಾಂಶಗಳ ನಿರ್ವಹಣೆ ಕುರಿತು ಹಾಗೂ ಡಾ. ರಶ್ಮಿ ಆರ್ ತೋಟಗಾರಿಕೆ ಬೆಳೆಗಳ ಕುರಿತು ಮಾಹಿತಿಯನ್ನು ನೀಡಿದರು. ಶ್ರೀ ಹರಿಪ್ರಸಾದ್ ರವರು ವಿಜ್ಞಾನಿಗಳನ್ನು ಹಾಗೂ ಕೃಷಿಕರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಒಟ್ಟು 22 ರೈತರು ಭಾಗವಹಿಸಿದ್ದರು ಹಾಗೂ ಆಯ್ದ 10 ರೈತರಿಗೆ ಕೃಷಿ ಪರಿಕಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!