ಜನ ಮನದ ನಾಡಿ ಮಿಡಿತ

Advertisement

ತುಳು ರಂಗಭೂಮಿಯಲ್ಲಿ ಬದಲಾವಣೆಯ ಗಾಳಿ: ವಿಜಯಕುಮಾರ್ ಕೊಡಿಯಾಲ್ ಬೈಲ್

ಮೂಡುಬಿದಿರೆ: ತುಳು ರಂಗಭೂಮಿಯಲ್ಲಿ ವಿಭಿನ್ನವಾದ ನಾಟಕಗಳು ಬಂದಿವೆ. ಇದೀಗ ಪಿಂಗಾರ ಕಲಾವಿದೆರ್ ತಂಡದ ‘ಕದಂಬ’ ನಾಟಕವು ಶೀರ್ಷಿಕೆಯು ವಿಶಿಷ್ಟ ಮತ್ತು ಕುತೂಹಲವಾಗಿದ್ದು ಇದು ನಾಟಕ ರಂಗದಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ ಈ ನಾಟಕವು ತುಳು ರಂಗಭೂಮಿಗೆ ಮೈಲುಗಲ್ಲಾಗಲಿ ಎಂದು ಹಿರಿಯ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಹೇಳಿದರು.


ಅವರು ಮಣಿ ಕೋಟೆಬಾಗಿಲು ಅವರ ನಿರ್ದೇಶನದ 8 ನೇ ನಾಟಕ ‘ಕದಂಬ”ವು ಕನ್ನಡ ಭವನದಲ್ಲಿ ನಡೆದ ಪ್ರಥಮ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಅಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಮಾತನಾಡಿ ತುಳು ನಾಟಕದ ಮೂಲಕ ಧಾರ್ಮಿಕ ಮತ್ತು ಸಾಮಾಜಿಕವಾಗಿ ಜನರಿಗೆ ಉತ್ತಮ ಸಂದೇಶವನ್ನು ನೀಡುತ್ತಾ ತುಳು ಭಾಷೆಯನ್ನು ಉಳಿಸಿ ಬೆಳೆಸುವಂತಹ ಕೆಲಸವನ್ನು ಮಣಿ ಕೋಟೆಬಾಗಿಲು ಮಾಡುತ್ತಿರುವುದು ಶ್ಲಾಘನೀಯ.
ಉದ್ಯಮಿ ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿ ಮಣಿ ಅವರ ನಾಟಕಗಳಲ್ಲಿ ಸಾಮಾಜಿಕ ಸುಧಾರಣೆಯ ಸಂದೇಶ ಇರುತ್ತದೆ ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಉದ್ಯಮಿ ಶ್ರೀಪತಿ ಭಟ್, ಸತ್ಯಪ್ರಕಾಶ್ ಹೆಗ್ಡೆ, ಸತೀಶ್ ಕಾಶಿಪಟ್ಣ, ಕೋಟೆಬಾಗಿಲು ಮಹಮ್ಮಾಯಿ ದೇವಸ್ಥಾನದ ಗೌರವ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಸತೀಶ್ ಹೊಸ್ಮಾರು ಕಾರ್ಯಕ್ರಮ ನಿರೂಪಿಸಿದರು. ನಾಟಕದ ರಚನೆಗಾರ ಮಣಿ ಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು‌

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!