ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಎಸ್‌ಇಜ಼ಡ್ ಡೆವೆಲಪ್‌ಮೆಂಟ್ ಕಮಿಷನರ್ ಹೇಮಲತಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೆಟಿ ನೀಡಿ ದೇವರ ದರ್ಶನ ಪಡೆದರು.

ಆನುವಂಶಿಕ ಮೊಕ್ತೇಸರ ಹಾಗೂ ಪವಿತ್ರಪಾಣಿ ಮಾಧವ್ ಭಟ್ ಕ್ಷೇತ್ರದ ಅರ್ಚಕ ಪದ್ಮನಾಭ ಭಟ್ ಪ್ರಸಾದ ನೀಡಿದರು. ಶ್ರೀ ಕ್ಷೇತ್ರದ ವತಿಯಿಂದ ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಇದ್ದರು. ದೇವಸ್ಥಾನದಲ್ಲಿ ನಡೆಯುವ ಒಂದು ತಿಂಗಳ ವಾರ್ಷಿಕ ಜಾತ್ರೆ, ಮೃಣ್ಮಯ ದೇವರ ಮೂರ್ತಿ ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ನೀಡಿದರು.



