ಹನ್ನೊಂದು ರ‍್ಷದ ಹಿಂದೆ ನಡೆದ ಕುಮಾರಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕರ‍್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅರ್ಜಿಯು ಇನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣದ ಆರೋಪಿ ಸಂತೋಷ್ ರಾವ್ ನಿರ್ದೂಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿಂದೆ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ವಿರುದ್ಧದ ಆರೋಪ ಸಾಬೀತು ಪಡಿಸಲು ವಿಫಲ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಸಂತೋಷ್ ರಾವ್ ಅವರನ್ನು ನಿರಾಪರಾಧಿ ಎಂದು ಬಿಡುಗಡೆಗೊಳಿಸಿದ್ರು. ಆ ಬಳಿಕ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಇತ್ತು. ಆದರೆ ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಆ ಮೂಲಕ ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.



