ಮುಲ್ಕಿ: ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಯ ಗ್ರಾಹಕರ ಸಮಾವೇಶ ಸಂಘದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ಓರಿಯಂಟಲ್ ಇನ್ಸೂರೆನ್ಸ್ ಕಂಪನಿಯ ಪ್ರಬಂಧಕ ಯಾದವ ದೇವಾಡಿಗ ಮಾತನಾಡಿ ನಾಯಕತ್ವಕ್ಕೆ ಬೆಂಬಲ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದರು.
ಸಂಘದ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ಮಾತನಾಡಿ ಸಂಘದ ಸದಸ್ಯರ, ಗ್ರಾಹಕರ, ನಿರ್ದೇಶಕರ ಪ್ರೋತ್ಸಾಹದಿಂದ ಸಂಘ ಅಭಿವೃದ್ದಿಯತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೊಂದು ಶಾಖೆಯನ್ನುಯನ್ನು ಸದ್ಯದಲ್ಲಿ ಆರಂಭಿಸುವ ಯೋಜನೆ ಇದೆ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಶಶೀoದ್ರ ಎಂ ಸಾಲ್ಯಾನ್, ಹಿರಿಯ ನಿರ್ದೇಶಕ ಉಮಾನಾಥ್ ಜೆ. ಶೆಟ್ಟಿಗಾರ್,
ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಸ್ಟೀವನ್ ಸರ್ಮೋತ್ತಮ,ಉಪಾಧ್ಯಕ್ಷರಾದ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಗಣೇಶ್ ಅಮೀನ್ ಸಂಕಮಾರ್,ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಜೈಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನ್‌ರಾಜ್ ಕೋಟ್ಯಾನ್, ಮಿರ್ಜಾ ಅಹಮ್ಮದ್, ಚಿರಂಜೀವಿ ಅಂಚನ್, ಶೆರಿಲ್ ಅಯೋನ ಐಮನ್, ಹರೀಶ್ ಎನ್. ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಹಕರಿಗೆ ಸಾಲದ ಅರ್ಜಿ ವಿತರಿಸಲಾಯಿತು.



