ಬಜಪೆ: ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ಚಿಕ್ಕಮಗಳೂರಿನಲ್ಲಿ ನ.7 ಮತ್ತು ನ.8 ರಂದು ಜರುಗಿದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿಧಿಸಿದ ಬಜಪೆ ಸಮೀಪದ ಸುಂಕದಕಟ್ಟೆಯ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.




