ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.

ಬಳಿಕ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದವನ್ನು ಸ್ವೀಕರಿಸಿದ್ದಾರೆ. ಈ ಸಂದರ್ಭ ಶ್ರೀ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್ ಅವರು, ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾರವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



