ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಪ್ಪನಾಡು ದೇವಸ್ಥಾನದ ಬ್ರಹ್ಮ ಕಲಶೋತ್ಸವ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ನಿಧನ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಬಿ. ಎಂ ನಾರಾಯಣಶೆಟ್ಟಿ(86) ಅನಾರೋಗ್ಯದಿಂದ ಬೆಂಗಳೂರಿನಲ್ಲಿರುವ ಬಸವೇಶ್ವರನಗರದ ತಮ್ಮ ನಿವಾಸದಲ್ಲಿ ನಿಧನರಾದರು.

ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಅವರು ಬಪ್ಪನಾಡು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ , ಹಿಂದಿನ ಸಮಿತಿಯ ಕಾರ್ಯಾಧ್ಯಕ್ಷರಾಗಿ, ಕೊಡುಗೈ ದಾನಿಯಾಗಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದರು.

ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ದೇವಸ್ಥಾನದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ವೇ.ಮೂ.ವಾದಿರಾಜ ಉಪಾಧ್ಯಾಯ ಕೊಲಕಾಡಿ, ಗೋಪಾಲಕೃಷ್ಣ ಭಟ್ ಬಪ್ಪನಾಡುಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಜಿಎಸ್‌ಬಿ ಸಭಾದ ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ , ಮುಲ್ಕಿ ವಿಜಯ ರೈತ ಸೇವಾ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಅತಿಕಾರಿ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಸದಸ್ಯ ದಯಾನಂದ ಮಟ್ಟು ಮುಲ್ಕಿ ನ.ಪಂ ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಹರ್ಷ ರಾಜ ಶೆಟ್ಟಿ, ಸತೀಶ್ ಅಂಚನ್, ಯೋಗೀಶ್ ಕೋಟ್ಯಾನ್, ಪುತ್ತು ಬಾವ, ಮುಲ್ಕಿ ನ.ಪಂ.ಮುಖ್ಯಾಧಿಕಾರಿ ಇಂದು ಎಂ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಜೆಡಿಎಸ್ ಪಕ್ಷದ ಮುಲ್ಕಿ ಘಟಕದ ನವೀನ್ ಪುತ್ರನ್, ಡಾ. ಹರಿಶ್ಚಂದ್ರ ಪಿ.ಸಾಲ್ಯಾನ್, ಶಶಿಂದ್ರ ಸಾಲ್ಯಾನ್, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು,ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ , ಉದ್ಯಮಿ ಶಿವರಾಮ್ ಜಿ ಅಮೀನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ಶಂಕರ್ ಪಡಂಗಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!