ತಪೋವನ ತೋಕೂರು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ತೋಕುರಿನ ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಬಗ್ಗೆ ಕಾರ್ಯಗಾರ ಹಾಗೂ ನಿವೃತ್ತ ಯೋಧ ಬೆಳ್ಳಾಲ. ಗೋಪಿನಾಥ ರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಜರಗಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾದ ವಿಶ್ರಾಂತ ಯೋಧ ಬೆಲ್ಲಾಳ ಗೋಪಿನಾಥ್ ರಾವ್ ಅವರನ್ನು ಸನ್ಮಾನಿಸಲಾಯಿತು ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಶ್ರೀಮತಿ ಶ್ರೀಲತಾ ರಾವ್ ರವರು ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ದೇಶಾಭಿಮಾನದ ಬಗ್ಗೆ ಮಾಹಿತಿಯನ್ನು ನೀಡುವುದು ಅತಿ ಅಗತ್ಯ ಈ ಮೂಲಕ ನಮ್ಮ ಮುಂದಿನ ಪೀಳಿಗೆ ದೇಶಭಕ್ತ ರಾಗಿ ಹೊರಹೊಮ್ಮವರು ಎಂದರು. ತರುವಾಯ ಯೋಧರೊಂದಿಗೆ ಮಕ್ಕಳ ಸಂವಾದ ಜರಗಿತು ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಅಧ್ಯಕ್ಷರಾದ ಸುಧೀರ್ ಬಾಳಿಗ, ಅಧ್ಯಕ್ಷರು ಶಿಕ್ಷಕ ರಕ್ಷಕ ಸಂಘ ಸ್ವರಾಜ್ ಶೆಟ್ಟಿ ಕಾರ್ಯದರ್ಶಿ ಪುಷ್ಪರಾಜ್ ಚೌಟ, ಕೋಶಾಧಿಕಾರಿ ಬಿ ಶಿವಪ್ರಸಾದ್ ,ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ವಲಯಧ್ಯಕ್ಷೆ ಪ್ರತಿಭಾ ಹೆಬ್ಬಾರ್, ಪ್ರಶಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು



