ಕಡಬ: ಬೊಲೇರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದುಬಿದ್ದ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಇಂದು ಮುಂಜಾನೆ ನಡೆದಿದೆ.

ಘಟನೆಯಲ್ಲಿ ವಾಹನದಲ್ಲಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ಈ ಅಪಘಾತ ಸಂಭವಿಸಿದೆ. ಢಿಕ್ಕಿ ಹೊಡೆದ ರಭಸಕ್ಕೆ ವಾಹನ ಜಖಂಗೊಂಡಿದೆ.
ಘಟನೆಯಲ್ಲಿ ವಾಹನದಲ್ಲಿದ್ದ ಮಗು ಸಹಿತ ಮೂವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.




