ಉಡುಪಿ:ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾವಳಿ-2023-24 ಪಂದ್ಯಾಟವು ನವೆಂಬರ್ 23 ರಿಂದ 26 ರವರೆಗೆ
ನಡೆಯಲಿದೆ ಎಂದು ಕಾಲೇಜು ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿಯಾದ ಡಾ.ಜಿ.ಎಸ್.ಚಂದ್ರಶೇಖರ್ ಹೇಳಿದ್ದಾರೆ.

ಇವರು ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿ, ಈ ನಾಲ್ಕು ದಿನಗಳ ಕ್ರೀಡಾಕೂಟದಲ್ಲಿ 16 ತಂಡಗಳು, 250 ಕ್ರೀಡಾಪಟುಗಳು, 50 ಕ್ರೀಡಾ ತರಬೇತುದಾರರು, 50 ತಂಡದ ವ್ಯವಸ್ಥಾಪಕರು ಮತ್ತು ತೀರ್ಪುಗಾರರು ಭಾಗವಹಿಸಲಿದ್ದಾರೆ. ಇನ್ನೂ ಪಂದ್ಯಾವಳಿಗೆ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಅಂತ ಮಾಹಿತಿಯನ್ನು ನೀಡಿದ್ದಾರೆ.



