ಜನ ಮನದ ನಾಡಿ ಮಿಡಿತ

Advertisement

ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತ ಕಡಿತ ಖಂಡನೀಯ; ಸುರೇಶ್ ಕಲ್ಲಾಗರ ಆಕ್ರೋಶ

ಉಡುಪಿ:ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬೋಗಸ್ ಕಾರ್ಡ್ ಹೆಚ್ಚಾಗಿವೆ ಎಂಬ ನೆಪವೊಡ್ಡಿ ಶೇ.75-80 ರಷ್ಟು ಸ್ಕಾಲರ್ ಶಿಪ್ ಕಡಿತ ಮಾಡಿರುವುದು ಖಂಡನೀಯ. ಬಡ ಕಾರ್ಮಿಕರ ಮಕ್ಕಳ ಸ್ಕಾಲರ್ ಶಿಪ್ ಮೊತ್ತದಲ್ಲಿ ಕಡಿತಗೊಳಿಸದೆ, ಈ ಹಿಂದೆ ನೀಡಲಾಗುತ್ತಿದ್ದ ಮೊತ್ತವನ್ನೇ ನೀಡಲು ರಾಜ್ಯ ಸರಕಾರ ತಕ್ಷಣವೇ ಕ್ರಮಕೈಕೊಳ್ಳಬೇಕು ಎಂದು ಕಟ್ಟಡ ಕಾರ್ಮಿಕ ಸಂಘಗಳ ಕುಂದಾಪುರ ತಾಲೂಕು ಅಧ್ಯಕ್ಷ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1ರಿಂದ 4ನೇ ತರಗತಿಯ ಮಕ್ಕಳಿಗೆ ಹಿಂದೆ ಸಿಗುತ್ತಿದ್ದ 5 ಸಾವಿರ ರೂ. ಶೈಕ್ಷಣಿಕ ಧನಸಹಾಯವನ್ನು 1100 ರೂ. ಗೆ ಇಳಿಸಲಾಗಿದೆ. ಪ್ರೌಢಶಾಲೆ, ಪಿಯುಸಿ, ಪದವಿ, ಎಂಜಿನಿಯರಿoಗ್, ಡಿಪ್ಲೊಮಾ ಸಹಿತ ವಿವಿಧ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕಾರ್ಮಿಕರ ಮಕ್ಕಳ ಸ್ಕಾಲರ್‌ಶಿಪ್ ಮೊತ್ತವನ್ನು ಕಡಿತ ಮಾಡಲಾಗಿದೆ. ಬೋಗಸ್ ಕಾರ್ಡ್ ಹೆಚ್ಚಳ ಎಂಬ ಕಾರಣವೊಡ್ಡಿ ಈ ರೀತಿ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸಿಡಬ್ಲ್ಯುಎಫ್ ಐ ರಾಜ್ಯಾಧ್ಯಕ್ಷ ಬಾಲಕೃಷ್ಣ, ಸಮಿತಿಯ ಯು. ಶಿವಾನಂದ್, ಚಿಕ್ಕ ಮೊಗವೀರ, ಶಶಿಕಲಾ
ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!