ಜನ ಮನದ ನಾಡಿ ಮಿಡಿತ

Advertisement

ಸಂಬಳ ಕೇಳಲು ಬಂದ ವ್ಯಕ್ತಿಗೆ ಬೂಟು ನೆಕ್ಕಿಸಿ ವಿಕೃತಿ ಮೆರೆದ ಮಹಿಳಾ ಉದ್ಯಮಿ.!

ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ.

ಸಂಬಳ ನೀಡುವಂತೆ ಒತ್ತಾಯ ಮಾಡಿದ ಎಂದು ಸಿಟ್ಟಿಗೆದ್ದ ಮಹಿಳೆ, ತನ್ನ ಕಂಪನಿಯ ಇತರ ಕಾರ್ಮಿಕರ ನೆರವು ಪಡೆದು 21 ವರ್ಷ ವಯಸ್ಸಿನ ದಲಿತ ಯುವಕನ ಬಾಯಿಗೆ ತನ್ನ ಚಪ್ಪಲಿಯನ್ನು ತುರುಕಿ, ಇತರ ನೌಕರರಿಂದ ಬೆಲ್ಟ್ ನಿಂದ ಹೊಡೆಸಿದ ಹೇಯ ಘಟನೆ ನಡೆದಿದೆ. ರಾಣಿಬಾ ಇಂಡಸ್ಟ್ರೀಸಿ ಎಂಬ ಸೆರಾಮಿಕ್ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ನಿಲೇಶ್ ದಾಲ್ಮಾನಿಯಾ ಎಂಬ ವ್ಯಕ್ತಿಯನ್ನು ಕೇವಲ 18 ದಿನಗಳಲ್ಲೇ ವಜಾಗೊಳಿಸಲಾಗಿತ್ತು. ಬಳಿಕ ಆ 18 ದಿನಗಳ ತನ್ನ ಕೆಲಸಕ್ಕೆ ನೀಡಬೇಕಾಗಿದ್ದ ಸಂಬಳ ಕೇಳಲು ನಿಲೇಶ್ ತನ್ನ ಇಬ್ಬರು ಸ್ನೇಹಿತರೊಂದಿಗೆ ರಾಣಿಬಾ ಇಂಡಸ್ಟ್ರೀಸಿ ಗೆ ತೆರಳಿದ ವೇಳೆ ನಿಲೇಶ್‌ನನ್ನು ಕಂಡು ಕೋಪಗೊಂಡ ರಾಣಿಬಾ ಮತ್ತು ಆಕೆಯ ಸಹಾಯಕ ಮೊದಲು ಮೂವರಿಗೂ ಕಪಾಳಮೋಕ್ಷ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಐವರು ಇತರ ಆರೋಪಿಗಳು ನಿಲೇಶ್‌ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ನಿಲೇಶ್ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಮಾಡಿದ್ದಾರೆ. ನಿಲೇಶ್ ಹಾಗೂ ಆತನ ಜೊತೆಗಾರರಿಗೆ ಥಳಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!