ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ,ಹಳೆಯಂಗಡಿ ಶ್ರೀ ಕ್ಷೇತ್ರದ ವಾರ್ಷಿಕ ಷಷ್ಠಿ ಮಹೋತ್ಸವ ಪೂರ್ವಭಾವಿಯಾಗಿ ಆದಿತ್ಯವಾರ ಸಂಜೆ ಗಂಟೆ 4: 00ಕ್ಕೆ ಗ್ರಾಮಸ್ಥರ ಮತ್ತು ಸಂಘ-ಸಂಸ್ಥೆಗಳ ಸಭೆಯು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಷಷ್ಠಿ ಉತ್ಸವದ ಸಂದರ್ಭದಲ್ಲಿ ನಿರ್ವಹಿಸಬೇಕಾದ ವಿವಿಧ ಕೆಲಸ ಕಾರ್ಯಗಳಿಗೆ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ನೀಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ಮಧುಸೂದನ್ ಆಚಾರ್ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುರುಷೋತ್ತಮ ರಾವ್, ಲೋಕಯ್ಯ ಸಾಲ್ಯಾನ್, ವಿಜಯ್ ಕುಮಾರ್ ರೈ, ಯೋಗೀಶ್ ಕೋಟ್ಯಾನ್, ವಿಪುಲ ಡಿ. ಶೆಟ್ಟಿಗಾರ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಸದಸ್ಯರಾದ ರತ್ನಾಕರ್ ಶೆಟ್ಟಿಗಾರ್ ಕಲ್ಲಾಪು, ಮೋಹನದಾಸ್ ಪೂಜಾರಿ, ಗ್ರಾಮಸ್ಥರಾದ ಪುರುಷೋತ್ತಮ ಕೋಟ್ಯಾನ್, ಸುಂದರ ಸಾಲ್ಯಾನ್ , ಪಡು ಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಹೇಮನಾಥ ಆಮೀನ್, ವಿನೋದ್ ಸಾಲ್ಯಾನ್, ಸಂತೋಷ್ ಕುಮಾರ್, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು , ದೇವಾಲಯದ ಸಿಬ್ಬಂದಿ ವರ್ಗ ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.







