ಜನ ಮನದ ನಾಡಿ ಮಿಡಿತ

Advertisement

ಇನ್ನೂ ಬಗೆಹರಿಯದ ನಿಗಮ ಮಂಡಳಿ ಬಿಕ್ಕಟ್ಟು; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಡಿಮ್ಯಾಂಡ್​ ಬೇರೆ ಬೇರೆ..!

ಆರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಪಟ್ಟಿ ಇವತ್ತು ಫೈನಲ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಇಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸ್ತಿದ್ದಾರೆ.

ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಧ್ಯಾಹ್ನ 2 ಗಂಟೆಗೆ ಸಿಎಂ, ‌ಡಿಸಿಎಂ ಜೊತೆ ಸಭೆ ನಡೆಯಲಿದೆ. ಶಾಸಕರ ಜೊತೆ 10 ರಿಂದ 15 ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಕುರಿತು ಇಂದು ತೀರ್ಮಾನವಾಗಲಿದೆ. ಈ ಹಿಂದೆ ಶಾಸಕರ ಜೊತೆಗೆ ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದರು.

ಮೊದಲ ಹಂತವಾಗಿ ಅಧಿವೇಶನಕ್ಕೂ ಮೊದಲೇ 20 ಶಾಸಕರು, 4 ಪರಿಷತ್ ಸದಸ್ಯರಿಗೆ ಹಂಚಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಧಿವೇಶನ ಆರಂಭಕ್ಕೂ ಮೊದಲೇ ಶಾಸಕರಿಗೆ ನಿಗಮ,‌ ಮಂಡಳಿ ಹಂಚಿಕೆಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ನಡೆಯುವ ಅಂತಿಮ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!