ಮುಲ್ಕಿ: ಡಿಸೆಂಬರ್ 24ರಂದು ಮುಲ್ಕಿ ಸೀಮೆಯ ಅರಸು ಕಂಬಳದಲ್ಲಿ ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಪಡುಪಣಂಬೂರು ಮುಲ್ಕಿ ಅರಮನೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ ಮೈಸೂರು ಒಡೆಯರು ಮುಲ್ಕಿ ಸೀಮೆಯ ಅರಸು ಕುಂಬಳಕ್ಕೆ ಆಗಮಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದ್ದು ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.
ಸಭೆಯಲ್ಲಿ ಮಂಗಳೂರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಚೈನ್ ಮಾತನಾಡಿ ಡಿಸೆಂಬರ್ 24ರಂದು ಮೈಸೂರು ಒಡೆಯರು ಆಗಮಿಸುವ ಸಂದರ್ಭ ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲು ಮನವಿ ಮಾಡಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ರಾಮ್ ಭಟ್ ಪಡುಪಣಂಬೂರು, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೊಲ್ನಾಡುಗುತ್ತು, ಶ್ರೀಕಾಂತ್ ಭಟ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್, ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಧರ್ಮದರ್ಶಿ ಮೋಹನ್ ದಾಸ್ ಸುರತ್ಕಲ್, ಕಲ್ಲಾಪು ಶ್ರೀ ವೀರಭದ್ರ ದೇವಸ್ಥಾನದ ಕಾಂತಣ್ಣ ಗುರಿಕಾರ, ಮುಲ್ಕಿ ಪೊಲೀಸ್ ಠಾಣೆಯ ಎಸ್ ಐ ಮಾರುತಿ,ಗೌತಮ್ ಜೈನ್ ಮುಲ್ಕಿ ಅರಮನೆ, ಮತ್ತಿತರರು ಉಪಸ್ಥಿತರಿದ್ದರು.
ಪೂರ್ವಭಾವಿ ಸಿದ್ಧತೆ ಬಗ್ಗೆ ಹಳೆಯಂಗಡಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ, ಮುಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸುನಿಲ್ ಆಳ್ವ,ಮಾಜೀ ಮುಖ್ಯಾಧಿಕಾರಿ ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ರಂಗಕರ್ಮಿ ಚಂದ್ರಶೇಖರ ಸುವರ್ಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸುಂದರ್ ರಾಜ್, ಮುಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದು ಯಶಸ್ವಿಗೊಳಿಸುವ ಬಗ್ಗೆ ಮಾತನಾಡಿದರು.
ವಿನೋದ್ ಸಾಲ್ಯಾನ್ ಬೆಳ್ಳಾಯರು ನಿರೂಪಿಸಿದರು.



