ಜನ ಮನದ ನಾಡಿ ಮಿಡಿತ

Advertisement

ಶಾಲಾ ಬಾಲಕನಿಗೆ ಎಸ್‌ಡಿಎಂಸಿ ಅಧ್ಯಕ್ಷನಿಂದ ಹಲ್ಲೆ..!!


ಪುಂಜಾಲಕಟ್ಟೆ : ಶಾಲಾ ಬಾಲಕನೋರ್ವ ಸೈಕಲ್ ಕಳ್ಳತನ ಮಾಡಿ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಅಧ್ಯಕ್ಷ ಬಾಲಕನಿಗೆ ಹಲ್ಲೆ ಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನ.೩೦ ರಂದು ಸಂಭವಿಸಿದೆ.


ಸಂತ್ರಸ್ಥ ಬಾಲಕ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿಕೊಂಡಿದ್ದು, ಬಾಲಕನು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂದಿಸಿದಂತೆ ನ.28ರಂದು ಬೆಳಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷಆರೋಪಿತ ಪರಮೇಶ ಎಂಬಾತ ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿರುತ್ತಾನೆ

. ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್ ಎಂಬವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿರುತ್ತಾರೆ. ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದು, ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ.30ರಂದು ಬೆಳಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿರುತ್ತಾರೆ ಎಂಬುದಾಗಿ ಸಂತ್ರಸ್ಥ ಬಾಲಕನು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಬಾಲನ್ಯಾಯ ಕಾಯಿದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!