ಜನ ಮನದ ನಾಡಿ ಮಿಡಿತ

Advertisement

ಆರ್​ಸಿಬಿಗೆ ಮತ್ತೆ ಮರಳುವ ಬಗ್ಗೆ ಮುನ್ಸೂಚನೆ ನೀಡಿದ ಎಬಿ ಡಿವಿಲಿಯರ್ಸ್, ಆದರೆ..!??

ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್​ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್​ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ. ​

ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್​ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

ನನಗೆ ಆರ್​ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್​ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್​ಸಿಬಿ ತಂಡದ ಕೋಚ್​ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!