ಬಂಟ್ವಾಳ ಡಿ 3, ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಯುವ ಸಾಹಿತಿ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಪ್ರಥಮ ಎಂ ಎ ವಿದ್ಯಾರ್ಥಿ ಶಿವ ಪ್ರಸಾದ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ಸ್ವಚ್ಛತೆಯಂತೆ ಸಾಮಾಜಿಕ ಸ್ವಚ್ಛತೆಯನ್ನೂ ಮಾಡಲೇ ಬೇಕಾದ ಕಾಲಘಟ್ಟವಿದು. ಪರಸ್ಪರ ಹೊಂದಾಣಿಕೆ, ಸ್ನೇಹ, ಸಹಜೀವನ, ಸಹಕಾರ, ಪ್ರೀತಿ, ಸಮಯ ಪಾಲನೆ ಮುಂತಾದ ಬದುಕಿನ ಅನಿವಾರ್ಯ ಅಂಶಗಳ ಕೊರತೆಯನ್ನು ನೀಗಿ, ಸದ್ಭಾವ ಪೂರ್ಣ, ಶಾಂತ ಮನಸ್ಕ ಸಮಾಜ ನಿರ್ಮಾಣದಲ್ಲಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಬೆಂಬಲವಾಗಿ ಕೂಡಿ ಬರಲಿ ಎಂದರು.
ಈ ಸಂದರ್ಭದಲ್ಲಿ ಸಾಹಿತಿ ಭಾಸ್ಕರ ಅಡ್ವಳ ವಿರಚಿತ ಘಮ ಘಮಿಸುವ ಗುಟ್ಟು ಎಂಬ ಜೀವನ ಮೌಲ್ಯಗಳ ಚಿಂತನಾ ಕೃತಿಯನ್ನು ಓಜಾಲ ಸ.ಹಿ.ಪ್ರಾ ಶಾಲಾ 7ನೇ ತರಗತಿ ವಿದ್ಯಾರ್ಥಿನಿ, ಎಳೆಯ ಸಾಹಿತಿ ಕುಮಾರಿ ಶ್ರುತಿಕಾ ಬಾಕಿಮಾರು ಅನಾವರಣಗೊಳಿಸಿದರು. ಈ ಕೃತಿಯು ಸಾಮಾಜಿಕ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಪೂರಕ ಉಪಕರಣದಂತಿದೆ ಎಂದು ಕು.ಶ್ರುತಿಕಾ ಹೇಳಿದರು.
ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀನಾಥ ಉಜಿರೆಯವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, “ಮಕ್ಕಳೆಡೆಗೆ ಸಾಹಿತ್ಯ” ಅಭಿಯಾನವನ್ನು ಆಯೋಜಿಸಿದೆ. ಸಮಾಜದ ಸ್ವಚ್ಛತೆ ಮತ್ತು ವಿಶ್ವ ಶಾಂತಿಯ ಸ್ಥಾಪನೆಗೆ ಪೂರಕವಾದ ಹೊಸ ಹೊಸ ಕೃತಿಗಳು ಪ್ರಕಟಗೊಳ್ಳಬೇಕು. ಮಕ್ಕಳ ಕಲಾ ಲೋಕ ಪ್ರಕಾಶಿತ ಕೃತಿ ಘಮ ಘಮಿಸುವ ಗುಟ್ಟು. ಕಿರಿಯರು, ಯುವಕರು ಮತ್ತು ಹಿರಿಯರು ಒಟ್ಟುಗೂಡಿ ಮಾಡುವ ಆದರ್ಶ ಚಿಂತನೆಗಳು ಸಮಷ್ಠಿಯ ಹಿತಕ್ಕೆ ಅನುಕೂಲವಾಗುತ್ತವೆ. ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿರುವ ಮಕ್ಕಳ ಕಲಾ ಲೋಕದ ಚಟುವಟಿಕೆಗಳು ಜಿಲ್ಲಾ ಹಂತಕ್ಕೆ ವಿಸ್ತರಣೆಯಾಗಬೇಕು. ಪರಿಷತ್ತು ಮಕ್ಕಳ ಕಲಾ ಲೋಕದ ಎಲ್ಲ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ಸಾಹಿತಿ ವಿ.ಬಿ. ಕುಳಮರ್ವ ಕುಂಬಳೆಯವರು ಸಮಯ ಕ್ಲಪ್ತತೆಗೆ ಹೆಸರಾದ ಮಕ್ಕಳ ಕಲಾಲೋಕ ಸಾಮಾಜಿಕ ಸ್ವಚ್ಛತೆಯ ಮೂಲಕ ವಿಶ್ವಶಾಂತಿಯ ಕನಸನ್ನು ಕಾಣಿತ್ತಿದೆ. ಅದರ ಕನಸು ನನಸಾಗಲು ಪ್ರತಿಯೊಬ್ಬರೂ ಹೆಗಲಾಗಬೇಕು. ಮಕ್ಕಳು ಬೆಳಗಿದರೆ ಸಮಾಜ ಬೆಳಗುತ್ತದೆ ಎಂಬ ಕಲಾಲೋಕದ ನಡೆ ಅಭಿನಂದನೀಯ ಎಂದರು.
ಸಾಹಿತಿ ಭಾಸ್ಕರ ಅಡ್ವಳರು ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಚತೆ ಅಭಿಯಾನದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು. ಬಂಟ್ವಾಳ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ ಉಪಸ್ಥಿತರಿದ್ದರು.
ಕಲ್ಲಂಗಳ ಕೇಪು ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಅಕ್ಷಿತಾ ಮುಳಿಯ, ಹರ್ಷಿತಾ ಮಣಿಯಾರ ಪಾದೆ ಮತ್ತು ಪೃಥ್ವಿ ಉಬರು ಸ್ಫರ್ತಿ ಗೀತೆ ಹಾಡಿ, ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಸಹನಾ ಕೋಲ್ಪೆ ಸ್ವಾಗತಿಸಿದರು. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ.ಬಾಯಾರು ಪ್ರಾಸ್ತಾವಿಸಿ, ಕಲ್ಲಡ್ಕ ಸರಕಾರಿ ಮಾ.ಹಿ.ಪ್ರಾ ಶಾಲಾ ವಿದ್ಯಾರ್ಥಿನಿ ಸ್ಫೂರ್ತಿ ವಂದಿಸಿದರು. ಸುರಿಬೈಲು ದಾರುಲ್ ಅಶ್ ಅರಿಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮುಹಮ್ಮದ್ ಸಾಬಿತ್ ಕಾರ್ಯಕ್ರಮನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…