ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್ ಅಜೀಜ್ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಜೀಜ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರು ವುದು ಕಂಡು ಬಂದಿದೆ.
ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…