ನಿರೀಕ್ಷೆಯಂತೆ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಪಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸ್ಪಷ್ಟ ಬಹುಮತದತ್ತ ಬಿಜೆಪಿ ದಾಪುಗಾಲಿರಿಸಿದ್ದರೆ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದತ್ತ ಹೆಜ್ಜೆ ಇಟ್ಟಿದೆ.ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿರುವುದರಿಂದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಿವಾಸದ ಮುಂದೆ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು ಜಯಘೋಷ ಮೊಳಗಿಸುತ್ತಿದ್ದಾರೆ.
ಮಧ್ಯ ಪ್ರದೇಶದ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 144 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಕೇವಲ 83 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 116 ಆಗಿದ್ದು ಈಗಾಗಲೇ ಬಿಜೆಪಿ 144 ಸ್ಥಾನಗಳ ಮುನ್ನಡೆಯಲ್ಲಿದ್ದು, ಸ್ಪಷ್ಟ ಬಹುಮತದತ್ತ ಸಾಗುತ್ತಿದೆ.
ರಾಜಸ್ಥಾನ ರಾಜ್ಯದಲ್ಲಿ ಎಕ್ಸಿಟ್ ಪೋಲ್ ಅಂದಾಜಿನ ಪ್ರಕಾರವೇ ಬಿಜೆಪಿ ಸಾಗುತ್ತಿದ್ದು,199 ಕ್ಷೇತ್ರಗಳ ಪೈಕಿ ಬಿಜೆಪಿ 116 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಕೇವಲ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ 100 ಮ್ಯಾಜಿಕ್ ನಂಬರ್ ಆಗಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಅಧಿಕಾರ ರಚನೆಯತ್ತ ಸಾಗಿದೆ.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…