ಮಾನಸಿಕ ಖಿನ್ನತೆಗೊಳಗಾದ ಬಾಣಂತಿ ಗೃಹಿಣಿಯೊಬ್ಬರು ತನ್ನ 4 ತಿಂಗಳ ಶಿಶುವನ್ನು ಟಬ್ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಗುಜ್ಜರಕೆರೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಗುಜ್ಜರಕೆರೆ ಸಮೀಪದ ಅಪಾರ್ಟ್ ಮೆಂಟ್ ನ ನಿವಾಸಿಯಾದ ಫಾತಿಮಾ(23) ಎಂಬ ಬಾಣಂತಿ ಯುವತಿ ಶಿಶುವನ್ನು ಕೊಂದು ಸಾವಿಗೆ ಶರಣಾದವರು ಎಂದು ತಿಳಿದು ಬಂದಿದೆ. ಫಾತಿಮಾ ಅವರು ಎರಡು ವರ್ಷಗಳ ಹಿಂದೆ ಹುಸೈನ್ ಎಂಬವರನ್ನು ವಿವಾಹವಾಗಿದ್ದರು. ಈ ದಂಪತಿಗೆ 4 ತಿಂಗಳ ಗಂಡು ಮಗು ಇದೆ.
ಫಾತಿಮಾ ಅವರು ಹೆರಿಗೆ ಬಳಿಕ ಮಾನಸಿಕ ಖಿನ್ನತೆಗೊಳಗಾದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಹೇಳುತ್ತಿದ್ದರು. ಅವರಿಗೆ ವೈದ್ಯರಲ್ಲಿ ಚಿಕಿತ್ಸೆ ಕೂಡ ನಡೆಯುತ್ತಿತ್ತು. ಆದರೆ ನಿನ್ನೆ ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫಾತಿಮಾ ತನ್ನ 4 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…