ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕಡಬ, ಮಂಗಳೂರು ಮತ್ತು ಉಳ್ಳಾಲ ತಾಲೂಕಿನ ಗ್ರಾ. ಪಂ. ಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಎರಡನೇ ತಂಡದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ ಮನೆಗಳ ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ SKDRDP ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿಯ ಯೋಜನಾಧಿಕಾರಿ ಪ್ರಿಯಾ ಆ್ಯಗ್ನೇಸ್, ಮೇಲ್ವಿಚಾರಕರಾದ ವನಿತಾ, ಲಲಿತಾ, ಎನ್.ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಜಯಾನಂದ, ಜಿಲ್ಲಾ ನರೇಗಾ ಐಇಸಿ ಸಂಯೋಜಕರಾದ ಸುನೀತಾ, ಮಂಗಳೂರು ಮತ್ತು ಉಳ್ಳಾಲ ತಾಲೂಕು ನರೇಗಾ ಐಇಸಿ ಸಂಯೋಜಕರಾದ ನಿಶ್ಮಿತ, ಸಂವಿಕೇಂದ್ರೀಕೃತ ತರಬೇತಿ ಸಂಯೋಜಕರಾದ ದೇವಕಿ ಮಾಂಟ್ರಾಡಿ, ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…