ಮುಲ್ಕಿ: ದಿ. ನಾರಾಯಣ ಶೆಟ್ಟರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಶ್ರೀದೇವಿಯ ಆರಾಧನೆ ಮೂಲಕ ಪರಮ ಭಕ್ತರಾಗಿದ್ದರು ಎಂದು ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜ್ಞಾನ ಮಂದಿರದಲ್ಲಿ ನಡೆದ ಕ್ಷೇತ್ರದ ಬ್ರಹ್ಮಕಲಶೋತ್ಸವ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿ. ನಾರಾಯಣ ಶೆಟ್ಟರ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ ಅವರು ಅಭಿವೃದ್ಧಿಯ ಹರಿಕಾರ ಸಹಿತ ಕೊಡುಗೈ ದಾನಿಯಾಗಿದ್ದು ಅವರ ಆದರ್ಶಗಳನ್ನು ಹಾಗೂ ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರೆಸಿಕೊಂಡು ಹೋಗುವ ಕಾರ್ಯವಾಗಬೇಕು ಎಂದರು.
ಸಭೆಯಲ್ಲಿ ಕ್ಷೇತ್ರದ ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್ ,ಮಾಜೀ ಸಚಿವ ಅಭಯ ಚಂದ್ರ ಜೈನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಭಟ್ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಯದು ನಾರಾಯಣಶೆಟ್ಟಿ, ಅವಿನಾಶ್ ಕೋಟ್ಯಾನ್, ಉದ್ಯಮಿ ಜೀವನ್ ಶೆಟ್ಟಿ ಕಾರ್ನಾಡ್, ಸುನಿಲ್ ಆಳ್ವ, ಸಂಜೀವ ದೇವಾಡಿಗ ಬಪ್ಪನಾಡು, ಕರುಣಾಕರ ಶೆಟ್ಟಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸುರೇಶ್ ಬಂಗೇರ ಸಸಿಹಿತ್ಲು ಉದಯಕುಮಾರ್ ಶೆಟ್ಟಿ ಆದಿಧನ್, ಅಬ್ದುಲ್ ರಜಾಕ್, ಶಿವರಾಮ್ ಜಿ ಅಮೀನ್, ದಿ.ನಾರಾಯಣಶೆಟ್ಟಿ ಮನೆಯವರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.
ಬಳಿಕ ಮೌನ ಪ್ರಾರ್ಥನೆ ಸಲ್ಲಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…