ಮುಲ್ಕಿ: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಕೆನರಾ ಕಾಲೇಜು ಹಾಗೂ ಮುಲ್ಕಿ ಸೀಮೆ ಅರಸು ಕಂಬಳ ಸಮಿತಿ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಡಿಸೆಂಬರ್ 24ರಂದು ನಡೆಯಲಿರುವ ಸೀಮೆಯ ಅರಸು ಕಂಬಳದ ಪೂರ್ವಭಾವಿಯಾಗಿ ಸ್ವಚ್ಛದ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕುಸುಮಾ ಚಂದ್ರಶೇಖರ್ ಉದ್ಘಾಟಿಸಿ ಮಾತನಾಡಿ ಸ್ವಚ್ಛತೆ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದ್ದು ಸೇವಾ ಸಂಸ್ಥೆಗಳ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು, ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ್ ವಕೀಲರು, ಶ್ಯಾಮ್ ಪ್ರಸಾದ್, ವಿಜಯಕುಮಾರ್ ಶೆಟ್ಟಿ ಕೋಲ್ನಾಡು, ಚಂದ್ರಹಾಸ್ ಪಡು ತೋಟ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…