ಬಂಟ್ವಾಳ: ಗಾಂಜಾ ಮಾರಾಟ ಮತ್ತು ಸೇವೆನೆ ಮಾಡುತ್ತಿದ್ದ ಪ್ರಕರಣ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.]
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಜೊತೆಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ 2014 ರಲ್ಲಿ ಮಂಗಳೂರು ತಾಲೂಕಿನ ಮಂಜನಾಡಿ ಗ್ರಾಮದ ಉರು ಮನೆ ನಾಟೆಕಲ್ ನಿವಾಸಿ ಅಬ್ದುಲ್ ರಹಿಮಾನ್ ಅವರ ಮಗ ಅಶ್ರಫ್ ಎಂಬವರ ಮೇಲೆ ಪ್ರಕರಣ ದಾಖಲಾಗಿ,ಜೈಲು ಸೇರಿದ್ದ.ಆದರೆ ಜಾಮೀನಿನ ಮೇಲೆ ಬಿಡುಗಡೆ ಗೊಂಡ ಈತ ಅಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ನ್ಯಾಯಾಲಯದ ಆದೇಶದಂತೆ ಕಳೆದ ತಿಂಗಳು ಈತನನ್ನು ಬಂಧಿಸಿದ ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ದಂಡ. ವಿಧಿಸಿ ಬಿಡುಗಡೆ ಮಾಡಿತ್ತು.ಆದರೆ ಈತ ಮತ್ತೆ ಅದೇ ಚಾಳಿಯನ್ನು ಮುಂದುವರಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದೀಗ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್. ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ಹಾಗೂ ವಿಜಯಕುಮಾರ್ ಅವರು ಆರೋಪಿಯನ್ನು ದೇರಳಕಟ್ಟೆಯ ಕುತ್ತಾರು ಎಂಬಲ್ಲಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…