ಮುಲ್ಕಿ: ಮಧ್ಯಪ್ರದೇಶ, ರಾಜಸ್ಥಾನ , ಛತ್ತಿಸ್ ಗಢ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಅನಿರೀಕ್ಷಿತವಾಗಿದ್ದು ಸೋಲನ್ನು ಪರಾಮರ್ಶಿಸಲಾಗುವುದು ಎಂದು ರಾಜ್ಯ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವರ ಮುಲ್ಕಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಜೆಪಿ ಶಾಸಕರು ಸ್ವಂತ ಇಚ್ಛೆಯೊಂದಿಗೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.

ಬೆಂಗಳೂರಿನಲ್ಲಿ ನಡೆಯಲಿರುವ ಬಿಲ್ಲವ ಈಡಿಗ ಸಮಾವೇಶ ಯಾವುದೇ ಪಕ್ಷಕ್ಕೆ ಸಂಬಂಧಪಟ್ಟಿಲ್ಲ ಎಂದು ಹೇಳಿದ ಅವರು ಸಮಾಜ ಬಾಂಧವರು ಪಕ್ಷಾತೀತವಾಗಿ ಸಮಾವೇಶದಲ್ಲಿ ಭಾಗವಹಿಸಿ ಯಶಸ್ಸುಗೊಳಿಸಿ ಎಂದರು.
ತಮ್ಮ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವರು ಮುಂದಿನ ಲೋಕಸಭಾ ಚುನಾವಣಾ ಅಭ್ಯರ್ಥಿಗಳು ಆಯ್ಕೆ ಸಿದ್ಧತೆ ನಡೆಯುತ್ತಿದ್ದು ಸರ್ವಸಮತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದರು. ಕರಾವಳಿ ಹಿಂದುತ್ವದ ಭದ್ರಕೋಟೆ ಎಂದು ಹೇಳುತ್ತಿರುವ ಬಿಜೆಪಿಗೆ ಮುಂದಿನ ದಿನಗಳಲ್ಲಿ ತಿರುಗುಬಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



