ಮುಲ್ಕಿ: ಅನಾರೋಗ್ಯದಿಂದ ಬಳಲುತ್ತಿರುವ ಯಕ್ಷಗಂಧರ್ವ, ಪಾರ್ತಿಸುಬ್ಬ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ ಗಣೇಶ್ ಕೊಲಕಾಡಿ ಮನೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯ ಹಸ್ತ ನೀಡಿದರು.

ಈ ಸಂದರ್ಭ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಮುಲ್ಕಿ ವಿಜಯ ರೈತ ಸೇವಾ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ, ನಿರ್ದೇಶಕ ದೇವಪ್ರಸಾದ್ ಕೆಂಪುಗುಡ್ಡೆ, ಗಿರಿಧರ ಕಾಮತ್ ಕೆದುಬರಿ, ಜನಾನಂದ ಶೆಟ್ಟಿ ತಿಂಗೊಳೆ ಮನೆ, ವಿಠಲ್ ಎನ್ ಎಂ ಮತ್ತಿತರರು ಉಪಸ್ಥಿತರಿದ್ದರು



