ಪುತ್ತೂರು:ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಎರಡು ದಿನಗಳು ನಡೆದ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆ61 ಅಂಕ ಪಡೆದು ಸತತ 10ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಇದೇ ವೇಳೆ ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಮಾತನಾಡಿ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿಯವರು ಸಂಘಟನಾ ಚತುರರು, ಹಿಡಿದ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುವವರು. ಅವರು ಯಶಸ್ವಿ ನಾಯಕರು. ಅವರಿಗೆ ಅವಕಾಶಗಳು ಸಿಗದೇ ಇರಬಹುದು. ಆದರೆ ಜನರ ಮನಸ್ಸಿನಲ್ಲಿ ಯಾವತ್ತೂ ಇದ್ದಾರೆ ಅಂತ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕ್ರೀಡಾ ಕಾರಂಜಿಯನ್ನು ಯಶಸ್ವಿಯಾಗಿ ನಡೆಯಲು ನೇತೃತ್ವ ವಹಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಎರಡು ದಿನದ ಕ್ರೀಡಾಕೂಟದಲ್ಲಿ 4 ಮಂದಿ ದಾಖಲೆ ನಿರ್ಮಿಸಿದ್ದು, ಸಭಾ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ನೀಡಲಾಗಿದೆ.



